WPL ನಲ್ಲಿ ಹೊಸ ಇತಿಹಾಸ ಬರೆದ RCB ಸ್ಪಿನ್ನರ್

| Updated By: ಝಾಹಿರ್ ಯೂಸುಫ್

Updated on: Feb 25, 2024 | 8:10 AM

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೇವಲ 2 ರನ್​ಗಳ ರೋಚಕ ಗೆಲುವು ದಾಖಲಿಸಿದೆ.

1 / 6
WPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ (UPW)​ ವಿರುದ್ಧದ ರಣರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆರ್​ಸಿಬಿ ಸ್ಪಿನ್ನರ್ ಆಶಾ ಸೋಭನಾ. ಈ ಪಂದ್ಯದಲ್ಲಿ ನಾಲ್ಕು ಓವರ್​ಗಳನ್ನು ಎಸೆದಿದ್ದ ಆಶಾ ಕೇವಲ 22 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

2 / 6
ಈ ಐದು ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಐದು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆ ಬರೆದರು. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಬೌಲರ್​ ಎಂಬ ಹಿರಿಮೆಗೂ ಪಾತ್ರರಾದರು. ಇದಲ್ಲದೆ RCB ಫ್ರಾಂಚೈಸಿ ಪರ ಈ ಸಾಧನೆ ಮಾಡಿದ 5ನೇ ಬೌಲರ್ ಎನಿಸಿಕೊಂಡರು.

3 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ. 2009 ರಲ್ಲಿ ಕುಂಬ್ಳೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 5 ರನ್ ನೀಡಿ 5 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

4 / 6
ಇದಾದ ಬಳಿಕ 2013 ರಲ್ಲಿ ಜಯದೇವ್ ಉನಾದ್ಕಟ್, 2021 ರಲ್ಲಿ ಹರ್ಷಲ್ ಪಟೇಲ್ ಹಾಗೂ 2022 ರಲ್ಲಿ ವನಿಂದು ಹಸರಂಗ ಆರ್​ಸಿಬಿ ಪರ 5 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಈ ನಾಲ್ವರನ್ನು ಹೊರತುಪಡಿಸಿ ಆರ್​ಸಿಬಿ ಪುರುಷರ ತಂಡದ ಪರ ಯಾವುದೇ ಬೌಲರ್ 5 ವಿಕೆಟ್​ಗಳನ್ನು ಕಬಳಿಸಿಲ್ಲ.

5 / 6
ಇದೀಗ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಉರುಳಿಸಿ ಆಶಾ ಸೋಭನಾ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಆರ್​ಸಿಬಿ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 11 ರನ್​ಗಳ ಅವಶ್ಯಕತೆಯಿತ್ತು. ಆದರೆ ಅಂತಿಮ ಓವರ್​ನಲ್ಲಿ ಕೇವಲ 8 ರನ್ ನೀಡುವ ಮೂಲಕ ಆರ್​ಸಿಬಿ ತಂಡವು 2 ರನ್​ಗಳ ರೋಚಕ ಜಯ ಸಾಧಿಸಿದೆ.