WPL Retention 2026: ಆರ್​ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ; 5 ತಂಡಗಳಲ್ಲಿ ಉಳಿದುಕೊಂಡವರ ಪಟ್ಟಿ ಇಲ್ಲಿದೆ

Updated on: Nov 05, 2025 | 10:07 PM

WPL Retained Players List 2026: ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜು ನವೆಂಬರ್ 27ರಂದು ನಡೆಯುವ ಸಾಧ್ಯತೆ ಇದೆ. ಅದಕ್ಕೂ ಮುನ್ನ, ತಂಡಗಳು ತಮ್ಮ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಅಂತಿಮಗೊಳಿಸಿವೆ. ಮುಂಬೈ ಇಂಡಿಯನ್ಸ್ 5, ಆರ್‌ಸಿಬಿ 4, ಡೆಲ್ಲಿ ಕ್ಯಾಪಿಟಲ್ಸ್ 5 ಆಟಗಾರ್ತಿಯರನ್ನು ಉಳಿಸಿಕೊಂಡಿವೆ. ಗುಜರಾತ್ 2, ಯುಪಿ ವಾರಿಯರ್ಸ್ ಒಬ್ಬರನ್ನು ಮಾತ್ರ ಉಳಿಸಿಕೊಂಡಿದೆ. ದೀಪ್ತಿ ಶರ್ಮಾ ಬಿಡುಗಡೆಯಾಗಿದ್ದು ಆಶ್ಚರ್ಯ ತಂದಿದೆ.

1 / 6
ಮಹಿಳಾ ಪ್ರಿಮಿಯರ್​ ಲೀಗ್​ನ 4ನೇ ಆವೃತ್ತಿಯ ಮೆಗಾ ಹರಾಜು ಇದೇ ತಿಂಗಳ 27 ರಂದು ನಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೂ ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆ ಮಾಡಲು ನವೆಂಬರ್ 5 ಅನ್ನು ಕೊನೆಯ ದಿನವಾಗಿ ನಿಗದಿ ಮಾಡಲಾಗಿದೆ. ಹೀಗಾಗಿ ಎಲ್ಲಾ 5 ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆ ಮಾಡಿವೆ.

ಮಹಿಳಾ ಪ್ರಿಮಿಯರ್​ ಲೀಗ್​ನ 4ನೇ ಆವೃತ್ತಿಯ ಮೆಗಾ ಹರಾಜು ಇದೇ ತಿಂಗಳ 27 ರಂದು ನಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೂ ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆ ಮಾಡಲು ನವೆಂಬರ್ 5 ಅನ್ನು ಕೊನೆಯ ದಿನವಾಗಿ ನಿಗದಿ ಮಾಡಲಾಗಿದೆ. ಹೀಗಾಗಿ ಎಲ್ಲಾ 5 ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆ ಮಾಡಿವೆ.

2 / 6

ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ತಂಡದಲ್ಲಿ ಐವರು ಆಟಗಾರ್ತಿಯರನ್ನು ಉಳಿಸಿಕೊಂಡಿದೆ. ಅವರಲ್ಲಿ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸ್ಕಿವರ್-ಬ್ರಂಟ್, ಅಮನ್‌ಜೋತ್ ಕೌರ್, ಜಿ ಕಮಿಲಿನಿ ಮತ್ತು ಹೇಲಿ ಮ್ಯಾಥ್ಯೂಸ್ ಸೇರಿದ್ದಾರೆ.

3 / 6

ಹಾಗೆಯೇ ಡಬ್ಲ್ಯುಪಿಎಲ್​ನ ಎರಡನೇ ಆವೃತ್ತಿಯ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ನಾಲ್ವರು ಆಟಗಾರ್ತಿಯರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರುಗಳಲ್ಲಿ ನಾಯಕಿ ಸ್ಮೃತಿ ಮಂಧಾನ, ಆಸ್ಟ್ರೇಲಿಯಾದ ಅನುಭವಿ ಆಲ್‌ರೌಂಡರ್ ಎಲಿಸ್ ಪೆರ್ರಿ, ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಮತ್ತು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸೇರಿದ್ದಾರೆ.

4 / 6

ಮೂರು ಬಾರಿ ಫೈನಲ್​ಗೇರಿ ಚಾಂಪಿಯನ್ ಪಟ್ಟದಿಂದ ವಂಚಿತವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೂಡ ಐವರು ಆಟಗಾರ್ತಿಯರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರುಗಳಲ್ಲಿ ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ಮರಿಜಾನ್ನೆ ಕಪ್,ಅನ್ನಾಬೆಲ್ ಸದರ್ಲ್ಯಾಂಡ್, ನಿಕಿ ಪ್ರಸಾದ್.

5 / 6

ಉಳಿದಂತೆ ಗುಜರಾತ್ ಜೈಂಟ್ಸ್ ಫ್ರಾಂಚೈಸಿ ಕೇವಲ ಇಬ್ಬರು ಆಟಗಾರ್ತಿಯರನ್ನು ಉಳಿಸಿಕೊಂಡಿದ್ದು, ಆಸ್ಟ್ರೇಲಿಯಾದ ಅನುಭವಿ ಆಟಗಾರ್ತಿಯಾರದ ಆಶ್ಲೀ ಗಾರ್ಡ್ನರ್ ಮತ್ತು ಬೆತ್ ಮೂನಿ ಅವರನ್ನು ತಂಡದಲ್ಲಿ ಉಳಿಸಿಕೊಂಡಿದೆ.

6 / 6

ಯುಪಿ ವಾರಿಯರ್ಸ್ ಫ್ರಾಂಚೈಸಿ ಕೇವಲ ಒಬ್ಬ ಆಟಗಾರ್ತಿಯನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಅನ್​ಕ್ಯಾಪ್ಡ್ ಆಟಗಾರ್ತಿಯಾದ ಶ್ವೇತಾ ಸೆಹ್ರಾವತ್ ಅವರನ್ನು ಉಳಿಸಿಕೊಂಡಿರುವ ವಾರಿಯರ್ಸ್​, ಭಾರತದ ಇತ್ತೀಚಿನ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೀಪ್ತಿ ಶರ್ಮಾ ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ.

Published On - 10:05 pm, Wed, 5 November 25

Loading...
Unable to load recommendations.
Follow Us