Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB

WPL 2025 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಟ್ಟ ದಾಖಲೆಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಸೀಸನ್ ಆರಂಭಿಸಿದೆ. ಅದು ಸಹ ಬೌಲರ್​ಗಳ ಕಳಪೆ ಪ್ರದರ್ಶನದೊಂದಿಗೆ. ಇದಾಗ್ಯೂ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ನೀಡಿದ 202 ರನ್​ಗಳ ಗುರಿಯನ್ನು ಬೆನ್ನತ್ತಿ ಆರ್​ಸಿಬಿ ತಂಡ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Feb 15, 2025 | 12:54 PM

ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-3 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಆರ್​ಸಿಬಿ ಎರಡು  ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದೆ. ಅದು ಕೂಡ 20 ಓವರ್​ಗಳಲ್ಲಿ ಬರೋಬ್ಬರಿ 201 ರನ್​ಗಳನ್ನು ಚಚ್ಚಿಸಿಕೊಳ್ಳುವ ಮೂಲಕ..!

1 / 7
ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಬೆತ್ ಮೂನಿ (56) ಉತ್ತಮ ಆರಂಭ ಒದಗಿಸಿದ್ದರು.

2 / 7
ಆ ಬಳಿಕ ಬಂದ ನಾಯಕಿ ಆಶ್ಲೀ ಗಾರ್ಡ್ನರ್ ಆರ್​ಸಿಬಿ ಬೌಲರ್​ಗಳ ಬೆಂಡೆತ್ತುವ ಮೂಲಕ ಸಿಕ್ಸರ್​ಗಳ ಸುರಿಮಳೆಗೈದರು. ಅಲ್ಲದೆ ಕೇವಲ 37 ಎಸೆತಗಳಲ್ಲಿ  8 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 79 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್​ ನೆರವಿನಿಂದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

3 / 7
ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 200+ ರನ್​ ನೀಡಿದ ಅಪಕೀರ್ತಿಯೊಂದು ಆರ್​ಸಿಬಿ ತಂಡದ ಪಾಲಾಯಿತು. WPL ಇತಿಹಾಸದಲ್ಲಿ ಕೇವಲ 6 ಬಾರಿ ಮಾತ್ರ 200+ ಸ್ಕೋರ್ ಮೂಡಿಬಂದಿದೆ. ಈ ಆರಲ್ಲಿ ಮೂರು ಬಾರಿ ಆರ್​ಸಿಬಿ ತಂಡವೇ 200+ ಸ್ಕೋರ್ ಬಿಟ್ಟುಕೊಟ್ಟಿದೆ.

4 / 7
2023 ರ WPL ಸೀಸನ್​ನಲ್ಲಿ ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 223 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ 2023 ರಲ್ಲೇ ಗುಜರಾತ್ ಜೈಂಟ್ಸ್ ತಂಡ 201 ರನ್​ ಚಚ್ಚಿದ್ದರು. ಇದೀಗ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ತಂಡವೇ 201 ರನ್​ ಬಾರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 200 ರನ್ ನೀಡಿದ ತಂಡವೆಂಬ ಅನಗತ್ಯ ದಾಖಲೆ ಆರ್​ಸಿಬಿ ತಂಡದ ಪಾಲಾಗಿದೆ.

5 / 7
ಹಾಗೆಯೇ ವುಮೆನ್ಸ್ ಪ್ರೀಮಿಯರ್ ಲೀಗ್​ ಇನಿಂಗ್ಸ್​ವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ತಂಡವೆಂಬ ಹೀನಾಯ ದಾಖಲೆಗೂ ಆರ್​ಸಿಬಿ ಕೊರೊಳೊಡ್ಡಿದೆ. 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಬೌಲರ್​ಗಳು 11 ಸಿಕ್ಸ್ ಚಚ್ಚಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೌಲರ್​ಗಳು 10 ಸಿಕ್ಸ್ ಹೊಡೆಸಿಕೊಂಡಿದ್ದಾರೆ.

6 / 7
ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ಏಕೈಕ ತಂಡವೆಂಬ ಅಪಕೀರ್ತಿಗೆ ಪಾತ್ರವಾಗಿದೆ. ಅಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡದ ಬೌಲರ್​ಗಳು ಪಂದ್ಯವೊಂದರಲ್ಲಿ 10 ಸಿಕ್ಸ್​ಗಳನ್ನು ಚಚ್ಚಿಸಿಕೊಂಡಿಲ್ಲ..!

7 / 7
Follow us
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ

ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು

ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ

ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್

ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ