2 x 2 = 4: ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ
WPL 2025: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನ ಮೊದಲೆರಡು ಪಂದ್ಯಗಳಲ್ಲಿ ಆರ್ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 4 ಮ್ಯಾಚ್ಗಳಲ್ಲೂ ಸ್ಮೃತಿ ಮಂಧಾನ ಪಡೆ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.
Updated on: Mar 02, 2025 | 9:53 AM

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್ಸಿಬಿ ತಂಡ ಮುಗ್ಗರಿಸಿದೆ.

ಈ ಸತತ ಸೋಲುಗಳೇ ಈಗ ಆರ್ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

ಬದಲಾಗಿ ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್ಸಿಬಿ ಮುಂದಿನ ಹಂತಕ್ಕೇರಬಹುದು.

ಇಲ್ಲಿ ಆರ್ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್ಗೆ ಪ್ರವೇಶಿಸಬಹುದು.

ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



