ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-3 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬಲಿಷ್ಠ ತಂಡವನ್ನು ರೂಪಿಸಿದೆ. ಈ ಬಾರಿಯ ಹರಾಜಿಗೂ ಮುನ್ನ 6 ಆಟಗಾರ್ತಿಯರನ್ನು ರಿಲೀಸ್ ಮಾಡಿ, ಆರ್ಸಿಬಿ ಒಟ್ಟು 13 ಪ್ಲೇಯರ್ಸ್ಗಳನ್ನು ಉಳಿಸಿಕೊಂಡಿತ್ತು.
ಇನ್ನು 3.25 ಕೋಟಿ ರೂ. ಕೋಟಿ ರೂ.ನೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಆರ್ಸಿಬಿ 4 ಆಟಗಾರ್ತಿಯರನ್ನು ಖರೀದಿಸಿದೆ. ಅದರಂತೆ ಇದೀಗ ಆರ್ಸಿಬಿ ತಂಡಕ್ಕೆ ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್ ಎಂಟ್ರಿ ಕೊಟ್ಟಿದ್ದಾರೆ.
ಈ ನಾಲ್ವರಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಪ್ರೇಮಾ ರಾವತ್. ಆಲ್ರೌಂಡರ್ ಆಗಿರುವ ಪ್ರೇಮಾ ರಾವತ್ ಅವರನ್ನು ಆರ್ಸಿಬಿ ಬರೋಬ್ಬರಿ 1.20 ಕೋಟಿ ರೂ.ಗೆ ಖರೀದಿಸಿದೆ. ಇನ್ನುಳಿದ ಮೂವರನ್ನು 10 ಲಕ್ಷ ರೂ. ಮೂಲ ಬೆಲೆಗೆ ಆರ್ಸಿಬಿ ತನ್ನದಾಗಿಸಿಕೊಂಡಿದೆ.
ಇನ್ನು ಈ ಹರಾಜಿಗೂ ಮುನ್ನ ಆರ್ಸಿಬಿ ಡೇನಿಯಲ್ ವ್ಯಾಟ್ ಅವರನ್ನು ಯುಪಿ ವಾರಿಯರ್ಸ್ ಅವರನ್ನು ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರ್ತಿ ಕೂಡ ಈ ಬಾರಿ ಆರ್ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರ್ಸಿಬಿ ಮಹಿಳಾ ನೂತನ ತಂಡ ಈ ಕೆಳಗಿನಂತಿದೆ...
RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಡಿವೈನ್, ಸೋಫಿ ಮೊಲಿನಿಯಕ್ಸ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್.