AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: RCB ತಂಡದಿಂದ ಕನ್ನಡತಿ ಔಟ್

WPL 2025 Shreyanka Patil: ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಬ್ಯಾಟ್ ಮೂಲಕ 81 ರನ್ ಕಲೆಹಾಕಿದರೆ, ಬೌಲಿಂಗ್​ನಲ್ಲಿ 19 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಕಳೆದ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ಕನ್ನಡತಿ ಶ್ರೇಯಾಂಕಾ ಕೊಡುಗೆ ಅಮೂಲ್ಯವಾದದ್ದು.

ಝಾಹಿರ್ ಯೂಸುಫ್
|

Updated on:Feb 16, 2025 | 7:35 AM

Share
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಅನ್ನು ಭರ್ಜರಿಯಾಗಿ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಗಾಯದಿಂದ ಬಳಲುತ್ತಿದ್ದು, ಹೀಗಾಗಿ ಅವರು ಈ ಬಾರಿಯ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

1 / 5
ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯೆಯಾಗಿರುವ ಶ್ರೇಯಾಂಕಾ ಪಾಟೀಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಕ್ಕೆ ಕಾರಣ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಈ ಗಾಯದ ಸಮಸ್ಯೆಯ ಕಾರಣ ಅವರು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

2 / 5
ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಶ್ರೇಯಾಂಕಾ ಪಾಟೀಲ್ 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಅಲ್ಲದೆ ಆಸ್ಟ್ರೇಲಿಯಾ ಪ್ರವಾಸ ಹಾಗೂ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿಗಳಿಂದಲೂ ಹೊರಗುಳಿದಿದ್ದರು. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾದರೂ ಶ್ರೇಯಾಂಕಾ ಕಾಣಿಸಿಕೊಂಡಿಲ್ಲ.

3 / 5
ಇತ್ತ ಆರ್​ಸಿಬಿ ತಂಡವು ವಡೋದರಾದಲ್ಲಿ ಮೊದಲ ಪಂದ್ಯವಾಡುತ್ತಿದ್ದರೆ, ಶ್ರೇಯಾಂಕಾ ಪಾಟೀಲ್ ಸೋಷಿಯಲ್ ಮೀಡಿಯಾದಲ್ಲಿ ಎದೆಗುಂದಿದೆ... ಆದರೆ ನಾನು ಮತ್ತೆ ಹಾರುತ್ತೇನೆ ಎಂಬಾರ್ಥದಲ್ಲಿ ಪೋಸ್ಟ್ ಹಾಕಿದ್ದರು. ಇದಕ್ಕೆ ಮುಖ್ಯ ಕಾರಣ ಅವರು ಈ ಬಾರಿಯ ಟೂರ್ನಿಯಿಂದ ಹೊರಗುಳಿಯುತ್ತಿರುವುದು ಎನ್ನಲಾಗಿದೆ.

4 / 5
ಇನ್ನು ಶ್ರೇಯಾಂಕಾ ಪಾಟೀಲ್ ಅವರ ಬದಲಿಯಾಗಿ ಆರ್​ಸಿಬಿ ತಂಡವು ಅನುಭವಿ ಆಲ್​ರೌಂಡರ್ ಸ್ನೇಹ್ ರಾಣಾ ಅವರನ್ನು ಆಯ್ಕೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಕಳೆದ ಸೀಸನ್​ನಲ್ಲಿ ಗುಜರಾತ್ ಜೈಂಟ್ಸ್ ಪರ ಆಡಿದ್ದ ಸ್ನೇಹ್ ರಾಣಾ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಆರ್​ಸಿಬಿ ತಂಡದ ಮೊದಲ ಪಂದ್ಯದ ವೇಳೆ ಸ್ನೇಹ್ ರಾಣಾ ಡಗೌಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಶ್ರೇಯಾಂಕಾ ಬದಲಿಯಾಗಿ ಸ್ನೇಹ್ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿರುವ ಸಾಧ್ಯತೆ ಹೆಚ್ಚಿದೆ.

5 / 5

Published On - 10:53 am, Sat, 15 February 25

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ