AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ? ಇಲ್ಲಿದೆ ರೆಡ್ ಆರ್ಮಿ ವೇಳಾಪಟ್ಟಿ

WPL 2025 RCB Schedule: ಬಿಸಿಸಿಐ ಪ್ರಕಟಿಸಿರುವ ಮಹಿಳಾ ಪ್ರೀಮಿಯರ್ ಲೀಗ್ 2025ರ ವೇಳಾಪಟ್ಟಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಫೆಬ್ರವರಿ 14 ರಿಂದ ಮಾರ್ಚ್ 11 ರವರೆಗೆ ಒಟ್ಟು 8 ಪಂದ್ಯಗಳನ್ನು ಆಡಲಿದೆ. ಬೆಂಗಳೂರು, ವಡೋದರ, ಮುಂಬೈ ಮತ್ತು ಲಕ್ನೋದಲ್ಲಿ ಪಂದ್ಯಗಳು ನಡೆಯಲಿವೆ. ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ವಡೋದರದಲ್ಲಿ ಆಡಲಿದೆ. ಲೀಗ್ ಹಂತದ ನಂತರ ಎಲಿಮಿನೇಟರ್ ಸುತ್ತು ಆರಂಭವಾಗಲಿದೆ.

ಪೃಥ್ವಿಶಂಕರ
|

Updated on: Jan 17, 2025 | 9:11 PM

Share
ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಅದರಂತೆ ಫೆಬ್ರವರಿ 14 ರಿಂದ ಈ ಟೂರ್ನಿ ಪ್ರಾರಂಭವಾಗಲಿದ್ದು, ಮಾರ್ಚ್ 11 ರಂದು ಕೊನೆಗೊಳ್ಳಲಿದೆ. ಮೊದಲ ಬಾರಿಗೆ ಈ ಲೀಗ್ ಅನ್ನು ನಾಲ್ಕು ನಗರಗಳಲ್ಲಿ ಆಯೋಜಿಸಲಾಗುತ್ತಿದ್ದು, ಬರೋಡಾ, ಬೆಂಗಳೂರು, ಮುಂಬೈ ಮತ್ತು ಲಕ್ನೋದಲ್ಲಿ ಪಂದ್ಯಗಳು ನಡೆಯಲಿವೆ.

1 / 10
ಈ ಪಂದ್ಯಾವಳಿಯಲ್ಲಿ ಒಟ್ಟು ಐದು ತಂಡಗಳು ಭಾಗವಹಿಸುತ್ತಿವೆ. ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ತಲಾ 2 ಪಂದ್ಯಗಳನ್ನು ಆಡಲಿವೆ. ಈ ರೀತಿಯಾಗಿ ಒಂದು ತಂಡ ಒಟ್ಟು ಎಂಟು ಪಂದ್ಯಗಳನ್ನು ಆಡುತ್ತದೆ. ಟೂರ್ನಿಯಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿವೆ. ಈ 22 ಪಂದ್ಯಗಳಲ್ಲಿ ಆರ್​ಸಿಬಿ ಆಡಲಿರುವ 8 ಪಂದ್ಯಗಳನ್ನು ಯಾವ ದಿನದಂದು ಯಾವ ತಂಡದ ಎದುರು ಎಲ್ಲಿ ಆಡುತ್ತದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

2 / 10
ಆರ್​ಸಿಬಿ ಹಾಲಿ ಚಾಂಪಿಯನ್ ಆಗಿರುವ ಕಾರಣ ಟೂರ್ನಿಯ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯಲಿದೆ. ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಟ್ರೋಫಿ ಎತ್ತಿಹಿಡಿದಿತ್ತು. ಹೀಗಾಗಿ ಇದೀಗ ಮೂರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ, ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಫೆಬ್ರವರಿ 14 ರಂದು ವಡೋದರದಲ್ಲಿ ನಡೆಯಲಿದೆ.

3 / 10
ಆ ಬಳಿಕ ಫೆಬ್ರವರಿ 17 ರಂದು ತನ್ನ ಎರಡನೇ ಪಂದ್ಯವನ್ನಾಡಲಿರುವ ಸ್ಮೃತಿ ಮಂಧಾನ ಪಡೆ, ಕಳೆದ ಬಾರಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ವಡೋದರದಲ್ಲಿ ಎದುರಿಸಲಿದೆ.

4 / 10
ಮೂರನೇ ಪಂದ್ಯವನ್ನು ಫೆಬ್ರವರಿ 21 ರಂದು ಆಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈ ಪಂದ್ಯದಲ್ಲಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ತವರು ಮೈದಾನ ಬೆಂಗಳೂರಿನಲ್ಲಿ ಎದುರಿಸಲಿದೆ.

5 / 10
ಫೆಬ್ರವರಿ 24 ರಂದು ನಡೆಯಲ್ಲಿರುವ ನಾಲ್ಕನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡ, ಹಾಲಿ ಚಾಂಪಿಯನ್ ಆರ್​ಸಿಬಿಗೆ ಎದುರಾಳಿಯಾಗಲಿದೆ. ಈ ಪಂದ್ಯವೂ ಕೂಡ ಬೆಂಗಳೂರಿನಲ್ಲಿ ನಡೆಯಲ್ಲಿದೆ.

6 / 10
ಫೆಬ್ರವರಿ 27 ರಂದು ನಡೆಯಲ್ಲಿರುವ ಐದನೇ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ ಎರಡನೇ ಬಾರಿಗೆ ಗುಜರಾತ್ ಜೈಂಟ್ಸ್ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ.

7 / 10
ಮಾರ್ಚ್​ 1 ರಂದು ಬೆಂಗಳೂರಿನಲ್ಲಿ ನಡೆಯುವ ಕೊನೆಯ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಲೀಗ್​ನಲ್ಲಿ ಎರಡನೇ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಪಂದ್ಯವನ್ನಾಡಲಿದೆ.

8 / 10
ತವರಿನಲ್ಲಿ ಆಡಿದ ಬಳಿಕ ಲಕ್ನೋಗೆ ಪ್ರಯಾಣ ಬೆಳೆಸಲಿರುವ ಆರ್​ಸಿಬಿ ತಂಡ ಮಾರ್ಚ್​ 8 ರಂದು ಯುಪಿ ವಾರಿಯರ್ಸ್​ ತಂಡದ ವಿರುದ್ಧ ಕಣಕ್ಕಿಳಿಯಲಿದೆ.

9 / 10
ಲೀಗ್​ನಲ್ಲಿ ತನ್ನ ಕೊನೆಯ ಪಂದ್ಯವನ್ನು ಮಾರ್ಚ್​ 11 ರಂದು ಆಡಲಿರುವ ಆರ್​ಸಿಬಿ, ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಮುಂಬೈನಲ್ಲಿ ಎದುರಿಸಲಿದೆ. ಈ ಪಂದ್ಯದ ಬಳಿಕ ಎಲಿಮಿನೇಟರ್ ಸುತ್ತು ಆರಂಭವಾಗಲಿದೆ.

10 / 10
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!