
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 27 ರಂದು ನಡೆಯಲಿರುವ ಈ ಹರಾಜಿನಲ್ಲಿ ಬರೋಬ್ಬರಿ 277 ಆಟಗಾರ್ತಿಯರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ 8 ಆಟಗಾರ್ತಿಯರಿಗಾಗಿ ಮೊದಲ ಸುತ್ತಿನಲ್ಲೇ ಹರಾಜು ನಡೆಯಲಿದೆ. ಆ ಪ್ಲೇಯರ್ಸ್ ಯಾರೆಂದರೆ...

ಅಲಿಸ್ಸಾ ಹೀಲಿ: ವುಮೆನ್ಸ್ ಪ್ರೀಮಿಯರ್ ಲೀಗ್ 2025 ರಲ್ಲಿ ಯುಪಿ ವಾರಿಯರ್ಸ್ ತಂಡದ ನಾಯಕಿಯಾಗಿ ಕಾಣಿಸಿಕೊಂಡಿದ್ದ ಆಸ್ಟ್ರೇಲಿಯಾದ ಅಲಿಸ್ಸಾ ಹೀಲಿ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಅಲಿಸ್ಸಾ ಹೀಲಿಗಾಗಿ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.

ಸೋಫಿ ಡಿವೈನ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿದ್ದ ನ್ಯೂಝಿಲೆಂಡ್ ಆಟಗಾರ್ತಿ ಸೋಫಿ ಡಿವೈನ್ ಅವರನ್ನು ಈ ಬಾರಿ ಆರ್ಸಿಬಿ ರಿಟೈನ್ ಮಾಡಿಕೊಂಡಿಲ್ಲ. ಅದರಂತೆ ಇದೀಗ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಸೋಫಿ ಡಿವೈನ್ ಮೊದಲ ಸುತ್ತಿನ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಸೋಫಿ ಎಕ್ಲೆಸ್ಟೋನ್: ಇಂಗ್ಲೆಂಡ್ ಆಲ್ರೌಂಡರ್ ಸೋಫಿ ಎಕ್ಲೆಸ್ಟೋನ್ ಕಳೆದ ಸೀಸನ್ನಲ್ಲಿ ಯುಪಿ ವಾರಿಯರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ತಂಡದಿಂದ ರಿಲೀಸ್ ಆಗಿರುವ ಅವರು 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಮೊದಲ ಸುತ್ತಿನ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಅಮೆಲಿಯಾ ಕೆರ್: ವುಮೆನ್ಸ್ ಪ್ರೀಮಿಯರ್ ಲೀಗ್ 2025ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ್ತಿ ಅಮೆಲಿಯಾ ಕೆರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 50 ಲಕ್ಷ ರೂ. ಮೂಲ ಬೆಲೆ ಘೋಷಿಸಿರುವ ಅಮೆಲಿಯಾ ಮೊದಲ ಸುತ್ತಿನ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಮೆಗ್ ಲ್ಯಾನಿಂಗ್: ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ತನ್ನ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅನ್ನು ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅದರಂತೆ ಇದೀಗ 50 ಲಕ್ಷ ರೂ. ಮೂಲ ಬೆಲೆ ಘೋಷಿಸಿರುವ ಮೆಗ್ ಲ್ಯಾನಿಂಗ್ಗಾಗಿ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.

ರೇಣುಕಾ ಸಿಂಗ್: ವುಮೆನ್ಸ್ ಪ್ರೀಮಿಯರ್ ಲೀಗ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ರೇಣುಕಾ ಸಿಂಗ್ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 40 ಲಕ್ಷ ರೂ. ಮೂಲ ಬೆಲೆ ಘೋಷಿಸಿರುವ ರೇಣುಕಾ ಕೂಡ ಮೊದಲ ಸುತ್ತಿನ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ದೀಪ್ತಿ ಶರ್ಮಾ: ಯುಪಿ ವಾರಿಯರ್ಸ್ ತಂಡದ ಉಪನಾಯಕಿಯಾಗಿ ಕಣಕ್ಕಿಳಿಯುತ್ತಿದ್ದ ಟೀಮ್ ಇಂಡಿಯಾದ ಆಲ್ರೌಂಡರ್ ದೀಪ್ತಿ ಶರ್ಮಾ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಇದೀಗ ಮಾರ್ಕ್ಯೂ ಲಿಸ್ಟ್ನಲ್ಲಿ ಕಾಣಿಸಿಕೊಂಡಿರುವ ದೀಪ್ತಿ ಶರ್ಮಾ ಅವರ ಖರೀದಿಗಾಗಿ ಮೊದಲ ಸುತ್ತಿನಲ್ಲೇ ಹರಾಜು ನಡೆಯಲಿದೆ.

ಲಾರಾ ವೋಲ್ವಾರ್ಡ್: ಗುಜರಾತ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಟಗಾರ್ತಿ ಲಾರಾ ವೋಲ್ವಾರ್ಡ್ ಅವರನ್ನು ರಿಲೀಸ್ ಮಾಡಿದ್ದಾರೆ. ಅದರಂತೆ ಇದೀಗ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿರುವ ಲಾರಾ ವೋಲ್ವಾರ್ಡ್ ಅವರಿಗಾಗಿ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.