WPL 2026: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್

Updated on: Nov 18, 2025 | 10:05 AM

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇನ್ನು ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದರು.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲು ಚಿಂತಿಸಲಾಗಿದೆ. ಅದರಂತೆ WPL 2026 ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆಯಿದೆ. ಮುಂಬರುವ ಟಿ20 ವಿಶ್ವಕಪ್​​​ಗೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

2 / 5
ಏಕೆಂದರೆ 2026ರ ಟಿ20 ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯವಹಿಸಲಿದೆ. ಈ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್​​ ಅನ್ನು ಆಯೋಜಿಸಲು ಭಾರತೀಯ ಕ್ರಿಕೆಟ್ ಮಂಡಳಿ ಪ್ಲ್ಯಾನ್ ರೂಪಿಸುತ್ತಿದೆ.

3 / 5
ಅದರಂತೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಜನವರಿ 7 ರಿಂದ ಶುರುವಾಗಲಿದ್ದು, ಫೆಬ್ರವರಿ 3 ರಂದು ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ. ಅಂದರೆ ಫೆಬ್ರವರಿಯ ಮೊದಲ ವಾರದಲ್ಲೇ WPL ಟೂರ್ನಿಗೆ ತೆರೆ ಎಳೆಯಲು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ.

4 / 5
ಇನ್ನು ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ರಿಟೈನ್ ಪಟ್ಟಿಯನ್ನು ಸಲ್ಲಿಸಿದ್ದು, ಇನ್ನುಳಿದ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಲಿದೆ. ಈ ಹರಾಜು ಪ್ರಕ್ರಿಯೆಯು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ.

5 / 5
ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಕೇವಲ 73 ಆಟಗಾರ್ತಿಯರಿಗೆ ಮಾತ್ರ ಅವಕಾಶ ದೊರೆಯಲಿದೆ. ಏಕೆಂದರೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರ್ತಿಯರನ್ನು ತಂಡದಲ್ಲೇ ಉಳಿಸಿಕೊಂಡಿದ್ದು, ಇದೀಗ  73 ಸ್ಲಾಟ್​ಗಳು ಮಾತ್ರ ಖಾಲಿಯಿದೆ. ಈ ಸ್ಥಾನಗಳಿಗಾಗಿ ನವೆಂಬರ್ 27 ರಂದು ಹರಾಜು ನಡೆಯಲಿದೆ.

Published On - 10:04 am, Tue, 18 November 25