ಸತತ ಸೋಲು… RCBಗೆ ನೇರವಾಗಿ ಫೈನಲ್ಗೇರಲು ಇರೋದು ಇದೊಂದೇ ದಾರಿ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 184 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 15 ರನ್ಗಳ ಜಯ ಸಾಧಿಸಿದೆ.
Updated on: Jan 27, 2026 | 7:34 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಇತಿಹಾಸ ಬರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್ಗಳಿಂದ ಪರಾಜಯಗೊಂಡಿದ್ದ ಆರ್ಸಿಬಿ ತಂಡವು ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 15 ರನ್ಗಳಿಂದ ಮುಗ್ಗರಿಸಿದೆ.

ಈ ಎರಡು ಸೋಲುಗಳೊಂದಿಗೆ ಆರ್ಸಿಬಿ ತಂಡದ ಡೈರೆಕ್ಟ್ ಫೈನಲ್ ಎಂಟ್ರಿಗೆ ತೊಡಕುಂಟಾಗಿದೆ. ಅಂದರೆ ಆರ್ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್ಗೆ ಪ್ರವೇಶಿಸುತ್ತಿತ್ತು. ಈ ಮೂಲಕ ಎಲಿಮಿನೇಟರ್ ಪಂದ್ಯವಾಡುವ ರಿಸ್ಕ್ನಿಂದ ಪರಾಗಬಹುದಿತ್ತು.

ಇದೀಗ ಎರಡು ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಂದರೆ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದರೆ ಮಾತ್ರ ಆರ್ಸಿಬಿ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ.

ಆರ್ಸಿಬಿ ತಂಡವು ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಜನವರಿ 29 ರಂದು ನಡೆಯಲಿರುವ ಈ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ಫೈನಲ್ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಕೂಡ ಸೋತರೆ ನೆಟ್ ರನ್ ರೇಟ್ ಲೆಕ್ಕಾಚಾರ ಪರಿಗಣನೆಗೆ ಬರಲಿದೆ.

ಏಕೆಂದರೆ ಮುಂದಿನ ಪಂದ್ಯಗಳ ಮೂಲಕ ಉಳಿದ ನಾಲ್ಕು ತಂಡಗಳಿಗೂ 10 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ. ಹೀಗೆ ಟಾಪ್-3 ತಂಡಗಳು 10 ಅಂಕಗಳನ್ನು ಪಡೆದುಕೊಂಡರೆ, ಅತ್ಯುತ್ತಮ ನೆಟ್ ರನ್ ರೇಟ್ ಹೊಂದಿರುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ. ಅಂದರೆ ಲೀಗ್ ಹಂತದ ಪಂದ್ಯದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು ಫೈನಲ್ಗೇರಲಿದೆ.

ಇದೀಗ 10 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ 12 ಅಂಕಗಳನ್ನು ಪಡೆಯಬಹುದು. ಈ ಮೂಲಕ ಎಲ್ಲಾ ತಂಡಗಳನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ನೇರವಾಗಿ ಫೈನಲ್ಗೆ ಪ್ರವೇಶಿಸಬಹುದು. ಅಂದರೆ ಆರ್ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಫೈನಲ್ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.
