AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026:  ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಟಾಪ್-3 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಇಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡ ಫೈನಲ್​​ಗೇರಿದರೆ, ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ.

ಝಾಹಿರ್ ಯೂಸುಫ್
|

Updated on: Jan 29, 2026 | 7:55 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. 

1 / 6
ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ ಪಡೆಯಲಿದೆ.

2 / 6
ಒಂದು ವೇಳೆ ಸೋತರೆ?... ಯುಪಿ ವಾರಿಯರ್ಸ್ ವಿರುದ್ಧ ಆರ್​ಸಿಬಿ ತಂಡ ಸೋತರೂ ಫೈನಲ್​ಗೇರಲು ಉತ್ತಮ ಅವಕಾಶವಿದೆ, ಅದು ಸಹ ನೆಟ್ ರನ್ ರೇಟ್​ ನೆರವಿನೊಂದಿಗೆ. ಏಕೆಂದರೆ ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.947 . ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊರತುಪಡಿಸಿ ಯಾವುದೇ ಟೀಮ್ ಉತ್ತಮ ನೆಟ್ ರನ್ ರೇಟ್ ಹೊಂದಿಲ್ಲ.

3 / 6
ಅದರಲ್ಲೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡ ಹೊಂದಿರುವುದು -0.271 ನೆಟ್ ರನ್ ರೇಟ್. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡು ಫೈನಲ್​ಗೇರಬಹುದು. ಆದರೆ ಇಲ್ಲಿ ಆರ್​ಸಿಬಿ ತಂಡದ ಯುಪಿ ವಾರಿಯರ್ಸ್ ವಿರುದ್ಧ ಹೀನಾಯವಾಗಿ ಸೋಲದಂತೆ ನೋಡಿಕೊಳ್ಳಬೇಕಿದೆ.

4 / 6
ಆರ್​ಸಿಬಿ ತಂಡವು ಯುಪಿ ವಾರಿಯರ್ಸ್ ವಿರುದ್ಧ ಕನಿಷ್ಠ 60 ರನ್​ಗಳ ಅಂತರದಿಂದ ಸೋತರೆ, ಅತ್ತ ಗುಜರಾತ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 160 ರನ್​ಗಳ ಅಂತರದಿಂದ ಗೆಲ್ಲಬೇಕು. ಅಂದರೆ ಮಾತ್ರ ಆರ್​ಸಿಬಿ ತಂಡವನ್ನು ಹಿಂದಿಕ್ಕಿ ನೆಟ್ ರನ್ ರೇಟ್ ಮೂಲಕ ಗುಜರಾತ್ ಜೈಂಟ್ಸ್ ತಂಡಕ್ಕೆ ಅಗ್ರಸ್ಥಾನಕ್ಕೇರಲು ಅವಕಾಶ ದೊರೆಯಲಿದೆ.

5 / 6
ಆದರೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ತಂಡಕ್ಕೆ 160 ರನ್​ಗಳ ಅಂತರದ ಗೆಲುವು ಕಷ್ಟಸಾಧ್ಯ. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ಸೋತರೂ ಆರ್​ಸಿಬಿ ತಂಡ ನೆಟ್ ರನ್ ರೇಟ್ ಮೂಲಕ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು. ಈ ಮೂಲಕ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ