AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

Jemimah Rodrigues captain: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಜೆಮಿಮಾ ರೊಡ್ರಿಗಸ್ ನೇಮಕಗೊಂಡಿದ್ದಾರೆ. ಕಳೆದ ಎರಡು ವರ್ಷಗಳ ನಾಯಕಿ ಮೆಗ್ ಲ್ಯಾನಿಂಗ್ ಬದಲಿಗೆ ಭಾರತದ ಸ್ಟಾರ್ ಆಟಗಾರ್ತಿ ಜೆಮಿಮಾಗೆ ಜವಾಬ್ದಾರಿ ನೀಡಲಾಗಿದೆ. ಡಿಸೆಂಬರ್ 23 ರಂದು ಅಧಿಕೃತ ಘೋಷಣೆ ನಿರೀಕ್ಷಿಸಲಾಗಿದೆ. ಜೆಮಿಮಾ ತಂಡದ ಪ್ರಮುಖ ಭಾಗವಾಗಿದ್ದು, ಅವರ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಪೃಥ್ವಿಶಂಕರ
|

Updated on: Dec 22, 2025 | 8:47 PM

Share
ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ.

1 / 6
ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆ ಮಾಡಲಾಯಿತು. ಇದಾದ ಬಳಿಕವೇ ಉಪನಾಯಕಿ ಜೆಮಿಮಾ ಅವರನ್ನು ನಾಯಕಿಯಾಗಿ ನೇಮಿಸಲು ಮುಂದಾಗಿದೆ.

2 / 6
ಕ್ರಿಕ್‌ಬಜ್ ವರದಿಯ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧ ಭಾರತವನ್ನು ವಿಶ್ವಕಪ್ ಗೆಲುವಿನತ್ತ ಮುನ್ನಡೆಸಿದ್ದ ಜೆಮಿಮಾಗೆ ಡೆಲ್ಲಿ ತಂಡದ ನಾಯಕತ್ವ ಸಿಗಲಿದೆ. ಕಳೆದ ತಿಂಗಳು ದೆಹಲಿಯಲ್ಲಿ ನಡೆದ WPL 2026 ಆಟಗಾರರ ಹರಾಜಿನ ಸಂದರ್ಭದಲ್ಲಿ, DC ಸಹ-ಮಾಲೀಕ ಪಾರ್ಥ್ ಜಿಂದಾಲ್ ಅವರು ರೊಡ್ರಿಗಸ್‌ಗೆ ನಾಯಕತ್ವವನ್ನು ಹಸ್ತಾಂತರಿಸುವ ಬಗ್ಗೆ ಸುಳಿವು ನೀಡಿದ್ದರು.

3 / 6
ಆದಾಗ್ಯೂ ಮೆಗಾ ಹರಾಜಿನಲ್ಲಿ ಡೆಲ್ಲಿ ಫ್ರಾಂಚೈಸಿ, ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೊಲ್ವಾರ್ಡ್ಟ್‌ರನ್ನು ಖರೀದಿಸಿದಾಗ ಅವರಿಗೆ ನಾಯಕತ್ವ ಸಿಗಬಹುದು ಎಂಬ ವದಂತಿ ಹಬ್ಬಿತ್ತು. ಆದರೆ ಈ ವದಂತಿಗೆ ತೆರೆ ಎಳೆದಿದ್ದ  ಪಾರ್ಥ್ ಜಿಂದಾಲ್ ಭಾರತೀಯರನ್ನು ನಾಯಕಿಯಾಗಿ ಮಾಡುವುದಾಗಿ ಹೇಳಿದ್ದರು. ಅದರಂತೆ ಈಗ ಜೆಮಿಮಾಗೆ ನಾಯಕತ್ವ ಸಿಗುತ್ತಿದೆ.

4 / 6
2023 ರಲ್ಲಿ ನಡೆದ ಮೊದಲ ಹರಾಜಿನಲ್ಲಿ ಡೆಲ್ಲಿ ಫ್ರಾಂಚೈಸಿ ಸೇರಿಕೊಂಡಿದ್ದ ಜೆಮಿಮಾ, ಮುಂದಿನ ಆವೃತ್ತಿಗೆ ದೆಹಲಿ ತಂಡ ಉಳಿಸಿಕೊಂಡ ಐದು ಆಟಗಾರ್ತಿಯರಲ್ಲಿ ಮೊದಲಿಗರಾಗಿದ್ದರು. ಜೆಮಿಮಾ ಜೊತೆಗೆ, ತಂಡವು ಶಫಾಲಿ ವರ್ಮಾ, ಅನ್ನಾಬೆಲ್ ಸದರ್ಲ್ಯಾಂಡ್ (ಆಸ್ಟ್ರೇಲಿಯಾ), ಮರಿಜಾನ್ನೆ ಕಪ್ (ದಕ್ಷಿಣ ಆಫ್ರಿಕಾ) ಮತ್ತು ಅಂಡರ್-19 ವಿಶ್ವಕಪ್ ವಿಜೇತ ನಾಯಕಿ ನಿಕ್ಕಿ ಪ್ರಸಾದ್ ಅವರನ್ನು ಸಹ ಉಳಿಸಿಕೊಂಡಿತು.

5 / 6
ಕಳೆದ ಮೂರು ಆವೃತ್ತಿಗಳಲ್ಲಿ ರೊಡ್ರಿಗಸ್ ಡೆಲ್ಲಿ ಕ್ಯಾಪಿಟಲ್ಸ್ ಪರ 27 ಪಂದ್ಯಗಳನ್ನು ಆಡಿರುವ ಜೆಮಿಮಾ 24 ಇನ್ನಿಂಗ್ಸ್‌ಗಳಲ್ಲಿ 28.16 ಸರಾಸರಿ ಮತ್ತು 139.66 ಸ್ಟ್ರೈಕ್ ರೇಟ್‌ನಲ್ಲಿ 507 ರನ್ ಗಳಿಸಿದ್ದಾರೆ. ಈ ವರ್ಷ ಭಾರತದ ಮೊದಲ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೆಮಿಮಾ, ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 127 ರನ್ ಬಾರಿಸಿದ್ದರು.

6 / 6
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ

ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ

ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ

ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!