WPL Points Table 2024: ಸತತ ಎರಡು ಗೆಲುವು; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್​ಸಿಬಿ..!

WPL Points Table 2024: ಲೀಗ್​ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಆರ್‌ಸಿಬಿ ತಂಡ 2 ರನ್​ಗಳಿಂದ ಜಯದ ನಗೆ ಬೀರಿತ್ತು. ಆ ಬಳಿಕ ಇದೀಗ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿ, ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ.

ಪೃಥ್ವಿಶಂಕರ
|

Updated on: Feb 28, 2024 | 3:21 PM

ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಆಡಿದ್ದ 8 ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಎರಡನೇ ಸೀಸನ್​ನಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದೆ.

1 / 9
ಲೀಗ್​ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಆರ್‌ಸಿಬಿ  ತಂಡ 2 ರನ್​ಗಳಿಂದ ಜಯದ ನಗೆ ಬೀರಿತ್ತು. ಆ ಬಳಿಕ ಇದೀಗ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿ, ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ.

2 / 9
ಲೀಗ್‌ನಲ್ಲಿ ನಡೆದ ಐದನೇ ಪಂದ್ಯದಲ್ಲಿ ಆರ್‌ಸಿಬಿ, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಗೆಲುವಿಗೆ ಗುಜರಾತ್ ನೀಡಿದ 108 ರನ್‌ಗಳ ಗುರಿಯನ್ನು ಇನ್ನು 45 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ಕಳೆದುಕೊಂಡು ಆರ್​ಸಿಬಿ ಸಾಧಿಸಿತು.

3 / 9
ತಂಡದ ಪರ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ 43 ರನ್‌ಗಳ ಇನಿಂಗ್ಸ್‌ ಆಡಿದರೆ, ಬೌಲಿಂಗ್ ನಲ್ಲಿ ರೇಣುಕಾ ಠಾಕೂರ್ 2 ಹಾಗೂ ಸೋಫಿ ಮೊಲಿನಿಯಕ್ಸ್ 3 ವಿಕೆಟ್ ಪಡೆದರು.

4 / 9
ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿದೆ. ಇದೀಗ ಆರ್‌ಸಿಬಿ ಟೇಬಲ್‌ ಟಾಪರ್‌ ಎನಿಸಿಕೊಂಡಿದೆ. ಆರ್‌ಸಿಬಿ ತನ್ನ ಎರಡೂ ಪಂದ್ಯಗಳನ್ನು ಗೆದ್ದು 1.665 ನೆಟ್​ ರನ್ ಹಾಗೂ​ 4 ಅಂಕ ಗಳಿಸಿದೆ.

5 / 9
ಅದೇ ಸಮಯದಲ್ಲಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸಹ ತನ್ನ ಎರಡೂ ಪಂದ್ಯಗಳನ್ನು ಗೆದ್ದು, ತಂಡವು 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈ ತಂಡದ ನೆಟ್ ರನ್ ರೇಟ್ 0.488 ಆಗಿದೆ.

6 / 9
ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಪಂದ್ಯಗಳನ್ನು ಆಡಿದ್ದು ಒಂದರಲ್ಲಿ ಗೆದ್ದು, ಒಂದರಲ್ಲಿ ಸೋತು 2 ಅಂಕಗಳನ್ನು ಹೊಂದಿದ್ದು, ತಂಡ 1.222 ನೆಟ್ ರನ್‌ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ.

7 / 9
ಉಳಿದಂತೆ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ತಮ್ಮ ಮೊದಲ ಎರಡು ಪಂದ್ಯಗಳಲ್ಲಿ ಸೋತಿವೆ. ಈ ಎರಡೂ ತಂಡಗಳು ಖಾತೆ ತೆರೆಯದೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.

8 / 9
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಆಡಿದ ಗುಜರಾತ್ ಜೈಂಟ್ಸ್  20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಉತ್ತರವಾಗಿ ಆರ್‌ಸಿಬಿ 12.3 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

9 / 9
Follow us