WPL ​ಗಿಂತಲೂ ಕಡಿಮೆ ಪಾಕಿಸ್ತಾನ್ ಸೂಪರ್ ಲೀಗ್​ನ ಬಹುಮಾನ ಮೊತ್ತ..!

IPL 2024 - PSL 2024: ಇಂಡಿಯನ್ ಪ್ರೀಮಿಯರ್ ಲೀಗ್​ಗೆ (ಐಪಿಎಲ್​) ಪರ್ಯಾಯವಾಗಿ ಪಾಕ್​ನಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್​ಎಲ್) ಅನ್ನು ಶುರು ಮಾಡಲಾಗಿತ್ತು. ಆದರೆ 2008 ರಲ್ಲಿ ಆರಂಭವಾದ ಐಪಿಎಲ್ ಬಹುಮಾನ ಮೊತ್ತ 20 ಕೋಟಿ ರೂ,ಗೆ ತಲುಪಿದರೆ, ಪಿಎಸ್​ಎಲ್​ ಪ್ರೈಸ್ ಮನಿ ಇನ್ನೂ ಕೂಡ 5 ಕೋಟಿ ರೂ. ದಾಟಿಲ್ಲ ಎಂಬುದೇ ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2024 | 9:53 AM

ಒಂದೆಡೆ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಮುಕ್ತಾಯವಾಗಿದೆ. ಮತ್ತೊಂದೆಡೆ ಪಾಕಿಸ್ತಾನ್ ಸೂಪರ್ ಲೀಗ್​ಗೆ (PSL 2024) ತೆರೆಬಿದ್ದಿದೆ. ಇತ್ತ ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಿರೀಟ ಮುಡಿಗೇರಿಸಿಕೊಂಡರೆ, ಅತ್ತ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್ ಯುನೈಟೆಡ್ (IU) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 6
ಇದರ ಬೆನ್ನಲ್ಲೇ ಉಭಯ ಲೀಗ್​ಗಳ ಬಹುಮಾನ ಮೊತ್ತ ಕೂಡ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಪಾಕಿಸ್ತಾನ್ ಸೂಪರ್ ಲೀಗ್​ಗಿಂತಲೂ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಅಧಿಕ ಬಹುಮಾನ ಮೊತ್ತವನ್ನು ಪಾವತಿಸಲಾಗುತ್ತಿದೆ.

2 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಿ 9 ವರ್ಷಗಳೇ ಕಳೆದಿವೆ. ಇದಾಗ್ಯೂ ಪಿಎಸ್​ಎಲ್​ನ ಬಹುಮಾನ ಮೊತ್ತ ಇನ್ನೂ ಕೂಡ 9 ಕೋಟಿಯ ಅಸುಪಾಸಿಗೂ ತಲುಪಿಲ್ಲ. ಆದರೆ ಕೇವಲ 2 ಸೀಸನ್​ ಪೂರೈಸಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪಿಎಸ್​ಎಲ್​ಗಿಂತಲೂ ಹೆಚ್ಚಿನ ಬಹುಮಾನ ಮೊತ್ತ ನೀಡಲಾಗುತ್ತಿದೆ.

3 / 6
ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-2 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಡೆದಿರುವ ಬಹುಮಾನ ಮೊತ್ತ ಬರೋಬ್ಬರಿ 6 ಕೋಟಿ ರೂ. ಇನ್ನು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಕೋಟಿ ರೂ. ಪಡೆದುಕೊಂಡಿದೆ.

4 / 6
ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-9 ರ ಫೈನಲ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಇಸ್ಲಾಮಾಬಾದ್ ಯುನೈಟೆಡ್ ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿರುವ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಸಿಕ್ಕಿರುವ ಬಹುಮಾನ ಮೊತ್ತ 4.15 ಕೋಟಿ ರೂ. ಹಾಗೆಯೇ ರನ್ನರ್ ಅಪ್ ಮುಲ್ತಾನ್ ಸುಲ್ತಾನ್ಸ್ ತಂಡಕ್ಕೆ ಕೇವಲ 1.6 ಕೋಟಿ ರೂ. ನೀಡಲಾಗಿದೆ.

5 / 6
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಹೋಲಿಸಿದರೆ ಪಾಕಿಸ್ತಾನ್ ಸೂಪರ್ ಲೀಗ್​ ಬಹುಮಾನ ಮೊತ್ತ 1.85 ಕೋಟಿ ರೂ. ಕಡಿಮೆ ಇದೆ. ಇನ್ನು ಐಪಿಎಲ್​ಗೆ ಹೋಲಿಸುವುದೇ ಬೇಡ, ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಬಹುಮಾನ ಮೊತ್ತ ಬರೋಬ್ಬರಿ 20 ಕೋಟಿ ರೂ.

6 / 6
Follow us
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ