ದಿಢೀರ್ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರ

Wriddhiman Saha Retirement: ಭಾರತದ ಪರ ಕಣಕ್ಕಿಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ಪರ 49 ಪಂದ್ಯಗಳನ್ನಾಡಿರುವ ಸಾಹ ಮೂರು ಶತಕ ಹಾಗೂ ಆರು ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು.

ಝಾಹಿರ್ ಯೂಸುಫ್
|

Updated on: Nov 04, 2024 | 8:53 AM

ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಂಗಾಳ ಪರ ಕಣಕ್ಕಿಳಿದಿರುವ ಸಾಹ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

1 / 5
ಈ ಮೂಲಕ 17 ವರ್ಷಗಳ ಸುದೀರ್ಘ ವೃತ್ತಿಜೀವನವನ್ನು ಕೊನೆಗೊಳಿಸಲು ವೃದ್ಧಿಮಾನ್ ಸಾಹ ನಿರ್ಧರಿಸಿದ್ದಾರೆ. ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ ಸಾಹ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ.

2 / 5
ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಕಲೆಹಾಕಿದ್ದಾರೆ.

3 / 5
ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 2014 ರ ಬಳಿಕ ಅವರಿಗೆ ಭಾರತ ಏಕದಿನ ತಂಡದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ.

4 / 5
ಇನ್ನು 2021ರವರೆಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದು, ಈ ಮೂಲಕ ಸುದೀರ್ಘ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.

5 / 5
Follow us