- Kannada News Photo gallery Cricket photos WTC 2023 2025 India full schedule tours matches list in kannada
WTC 2023-2025: 19 ಪಂದ್ಯ, 6 ದೇಶ! 3ನೇ ಆವೃತ್ತಿಯ ಡಬ್ಲ್ಯುಟಿಸಿಗೆ ಭಾರತದ ವೇಳಾಪಟ್ಟಿ ಹೀಗಿದೆ
WTC 2023-2025: 2023 ಹಾಗೂ 2025ರ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಂ ಇಂಡಿಯಾ ಒಟ್ಟು 19 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದರಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌತ್ ಆಫ್ರಿಕಾ ತಂಡಗಳನ್ನು ಎದುರಿಸಲಿದೆ.
Updated on: Jun 14, 2023 | 3:20 PM

ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಸೋತು ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ವಿಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆರಂಭಿಸಲಿದೆ.

2023 ಹಾಗೂ 2025ರ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಂ ಇಂಡಿಯಾ ಒಟ್ಟು 19 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದರಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌತ್ ಆಫ್ರಿಕಾ ತಂಡಗಳನ್ನು ಎದುರಿಸಲಿದೆ. ಇನ್ನು ಟೀಂ ಇಂಡಿಯಾ ಈ 6 ದೇಶಗಳ ವಿರುದ್ಧ ಎಷ್ಟು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ ಎಂಬುದನ್ನು ನೋಡುವುದಾದರೆ..

ಮೊದಲನೇಯದ್ದಾಗಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಮೂಲಕ ಈ 3ನೇ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ಆರಂಭಿಸಲಿದೆ. ಇದಕ್ಕಾಗಿ ಭಾರತ, ವಿಂಡೀಸ್ ಪ್ರವಾಸ ಮಾಡಲಿದ್ದು, ಉಭಯ ದೇಶಗಳ ನಡುವೆ ಜುಲೈ 12 ರಿಂದ ಜುಲೈ 24 ರವರೆಗೆ ಈ ಟೆಸ್ಟ್ ಸರಣಿ ನಡೆಯಲಿದೆ.

ಈ ಸರಣಿ ಬಳಿಕ 2 ಟೆಸ್ಟ್ ಪಂದ್ಯಗಳ ಸರಣಿಗಾಗಿ ಭಾರತ, ಆಫ್ರಿಕಾ ಪ್ರವಾಸ ಮಾಡಲಿದ್ದು, ಡಿಸೆಂಬರ್ 2023 ಮತ್ತು ಜನವರಿ 2024ರ ನಡುವೆ ಈ ಸರಣಿ ನಡೆಯಲ್ಲಿದೆ.

5 ಟೆಸ್ಟ್ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಎರಡೂ ತಂಡಗಳ ನಡುವೆ 2024ರ ಜನವರಿ ಮತ್ತು ಫೆಬ್ರವರಿ ನಡುವೆ ಈ ಸರಣಿ ನಡೆಯಲ್ಲಿದೆ.

ಇಂಗ್ಲೆಂಡ್ ಬಳಿಕ ಬಾಂಗ್ಲಾದೇಶ, ಭಾರತಕ್ಕೆ ಬರಲಿದ್ದು, ಈ ಎರಡೂ ತಂಡಗಳ ನಡುವೆ 2 ಟೆಸ್ಟ್ ಪಂದ್ಯಗಳ ಸರಣಿ 2024ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ನಡೆಯಲ್ಲಿದೆ.

ಈ ಎರಡು ತಂಡಗಳ ಬಳಿಕ 3ನೇ ತಂಡವಾಗಿ ಭಾರತಕ್ಕೆ ಬರಲ್ಲಿರುವ ನ್ಯೂಜಿಲೆಂಡ್, ಟೀಂ ಇಂಡಿಯಾ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಸರಣಿ 2024ರ ಅಕ್ಟೋಬರ್ ಹಾಗೂ ನವೆಂಬರ್ ನಡುವೆ ನಡೆಯಲಿದೆ.

ಅಂತಿಮವಾಗಿ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಈ ಸರಣಿ 2024ರ ನವೆಂಬರ್ ಹಾಗೂ 2025ರ ಜನವರಿ ನಡುವೆ ನಡೆಲ್ಲಿದೆ.



















