- Kannada News Photo gallery Cricket photos Wtc 2024 25 wtc updated points table after australia beat west indies in 1st test
WTC 2023-25: ವಿಂಡೀಸ್ಗೆ 10 ವಿಕೆಟ್ ಸೋಲು; ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮಹತ್ತರ ಬದಲಾವಣೆ
WTC 2023-25: ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 10 ವಿಕೆಟ್ಗಳಿಂದ ಮಣಿಸುವ ಮೂಲಕ ಆತಿಥೇಯ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ ನಂತರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಪಾಯಿಂಟ್ ಪಟ್ಟಿಯಲ್ಲೂ ಭಾರಿ ಬದಲಾವಣೆ ಕಂಡುಬಂದಿದೆ.
Updated on: Jan 19, 2024 | 6:25 PM

ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 10 ವಿಕೆಟ್ಗಳಿಂದ ಮಣಿಸುವ ಮೂಲಕ ಆತಿಥೇಯ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ ನಂತರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಪಾಯಿಂಟ್ ಪಟ್ಟಿಯಲ್ಲೂ ಭಾರಿ ಬದಲಾವಣೆ ಕಂಡುಬಂದಿದೆ.

ಈ ಸರಣಿಯ ಆರಂಭಕ್ಕೂ ಮುನ್ನ ಪಾಯಿಂಟ್ ಪಟ್ಟಿಯಲ್ಲಿ ನಂಬರ್-1 ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಈ ಗೆಲುವಿನೊಂದಿಗೆ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಇದಲ್ಲದೇ ಸದ್ಯ ಭಾರತ ಎರಡನೇ ಸ್ಥಾನದಲ್ಲಿದ್ದರೆ, ಈ ಸೋಲಿನೊಂದಿಗೆ ವಿಂಡೀಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಿಂದ ಎಂಟನೇ ಸ್ಥಾನಕ್ಕೆ ಜಾರಿದೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 61.11 ಗೆಲುವಿನ ಶೇಕಡವಾರು ಹೊಂದಿದೆ. ಆದರೆ ಭಾರತ ಆಡಿರುವ 4 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ 54.16 ಶೇಕಡವಾರುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇನ್ನು ವೆಸ್ಟ್ ಇಂಡೀಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ 2 ಸೋಲು ಮತ್ತು 1 ಡ್ರಾ ನಂತರ 8 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡ ಭಾರತ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮೊದಲು ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನವನ್ನು ತಲುಪಿದೆ.

ಈ ಅಂಕಪಟ್ಟಿಯಲ್ಲಿ ಶ್ರೀಲಂಕಾ ತಂಡ ಕೊನೆಯ ಸ್ಥಾನದಲ್ಲಿದ್ದು, ಇನ್ನೂ ಶೇಕಡಾವಾರು ಅಂಕಗಳ ಖಾತೆ ತೆರೆದಿಲ್ಲ.ಈ ಮೂರನೇ ಆವೃತ್ತಿಯಲ್ಲಿ ತಂಡ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಸೋಲು ಎದುರಿಸಿದೆ.

ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಇತರ ತಂಡಗಳ ಸ್ಥಾನವನ್ನು ನೋಡುವುದಾದರೆ, ದಕ್ಷಿಣ ಆಫ್ರಿಕಾ ತಂಡವು ಎರಡನೇ ಸ್ಥಾನದಲ್ಲಿದೆ. ಇಲ್ಲಿಯವರೆಗೆ 2 ಪಂದ್ಯಗಳನ್ನು ಆಡಿರುವ ಆಫ್ರಿಕಾ 1 ಗೆಲುವು 1 ಸೋಲು ಕಂಡಿದೆ.

ನ್ಯೂಜಿಲೆಂಡ್ ತಂಡವು ಶೇಕಡಾ 50 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ಐದನೇ ಸ್ಥಾನದಲ್ಲಿದೆ. ಪಾಕಿಸ್ತಾನದ ತಂಡವು ಶೇಕಡಾ 36.66 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನ ದೃಷ್ಟಿಯಿಂದ, ಈ ಟೆಸ್ಟ್ ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿದೆ. ಈ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.




