AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2025 final: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲುವು; 27 ವರ್ಷಗಳ ನಂತರ ಸಚಿನ್ ದಾಖಲೆ ಉಡೀಸ್

WTC 2025 final: ದಕ್ಷಿಣ ಆಫ್ರಿಕಾ 2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಐಡೆನ್ ಮಾರ್ಕ್ರಾಮ್ ಅವರ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಇದು ಐಸಿಸಿ ಟೂರ್ನಮೆಂಟ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ಶತಕವೂ ಆಗಿದ್ದು, ಮಾರ್ಕ್ರಾಮ್ ಈ ಶತಕದ ಮೂಲಕ ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on: Jun 14, 2025 | 11:06 PM

Share
2025 ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ 27 ವರ್ಷಗಳ ನಂತರ ಐಸಿಸಿ ಈವೆಂಟ್‌ನ ಟ್ರೋಫಿಯನ್ನು ಗೆದ್ದುಕೊಂಡಿತು. ಈ ಫೈನಲ್‌ನಲ್ಲಿ, ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ 136 ರನ್‌ಗಳ ಪಂದ್ಯ ಗೆಲ್ಲುವ ಇನ್ನಿಂಗ್ಸ್ ಆಡಿದರು.

1 / 6
ಮೊದಲ ಇನ್ನಿಂಗ್ಸ್​ನಲ್ಲಿ ಖಾತೆ ತೆರೆಯಲು ವಿಫಲರಾಗಿದ್ದ ಐಡೆನ್ ಮಾರ್ಕ್ರಾಮ್, ಎರಡನೇ ಇನ್ನಿಂಗ್ಸ್​ನಲ್ಲಿ ಆಸೀಸ್ ಬೌಲರ್​ಗಳನ್ನು ಇನ್ನಿಲ್ಲದಂತೆ ಕಾಡಿದರು. ಈ ಶತಕದ ಇನ್ನಿಂಗ್ಸ್‌ ಮೂಲಕ ಮಾರ್ಕ್ರಾಮ್, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಪ್ರಾಸಂಗಿಕವಾಗಿ, ಈ ದಾಖಲೆಯನ್ನು ಕೂಡ 27 ವರ್ಷಗಳ ನಂತರ ಮುರಿಯಲಾಗಿದೆ.

2 / 6
ಐಡೆನ್ ಮಾರ್ಕ್ರಾಮ್ ಅವರ 136 ರನ್‌ಗಳ ಇನ್ನಿಂಗ್ಸ್ ಆಸ್ಟ್ರೇಲಿಯಾಕ್ಕೆ ಸದಾ ನೆನಪಾಗುತ್ತದೆ. ಏಕೆಂದರೆ ಇದು ಯಾವುದೇ ಸ್ವರೂಪದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲಿ ದಾಖಲಾದ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ. ಈ ಮೊದಲು ಈ ದಾಖಲೆ 1998 ರಲ್ಲಿ ಶಾರ್ಜಾ ಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 134 ರನ್ ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು.

3 / 6
ಆ ಪಂದ್ಯದಲ್ಲಿ, ಸಚಿನ್ ತೆಂಡೂಲ್ಕರ್ ಅವರ ಈ ಶತಕದ ಇನ್ನಿಂಗ್ಸ್‌ನಿಂದ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡವವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. ಈಗ ಐಡೆನ್ ಮಾರ್ಕ್ರಾಮ್ ತಮ್ಮ ಶತಕದ ಇನ್ನಿಂಗ್ಸ್ ಮೂಲಕ ಆಸ್ಟ್ರೇಲಿಯಾ ವಿರುದ್ಧ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

4 / 6
ಪಂದ್ಯದ ಬಗ್ಗೆ ಹೇಳುವುದಾದರೆ, ಈ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 212 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 138 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ನೀಡಿದ 282 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಐದು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

5 / 6
ಡಬ್ಲ್ಯುಟಿಸಿ ಫೈನಲ್​ನಲ್ಲಿ ಶತಕ ಸಿಡಿಸುವ ಮೂಲಕ ಮಾರ್ಕ್ರಾಮ್, ಐಸಿಸಿ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಟೆಸ್ಟ್‌ನಲ್ಲಿ ಮಾರ್ಕ್ರಾಮ್ ಅವರ ಅಂಕಿಅಂಶಗಳನ್ನು ನೋಡುವುದಾದರೆ ಅವರು ಆಡಿರುವ 46 ಪಂದ್ಯಗಳಲ್ಲಿ 36.50 ಸರಾಸರಿ ಮತ್ತು 59.66 ಸ್ಟ್ರೈಕ್ ರೇಟ್‌ನಲ್ಲಿ 2993 ರನ್ ಗಳಿಸಿದ್ದಾರೆ. ಇದರಲ್ಲಿ 8 ಶತಕ ಮತ್ತು 13 ಅರ್ಧಶತಕಗಳು ಸೇರಿವೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ