WTC Final: ಹೀಗಾದರೆ ಫೈನಲ್​ಗೆ ಪ್ರವೇಶಿಸಿರುವ ಆಸ್ಟ್ರೇಲಿಯಾ ಹೊರಬೀಳಬಹುದು..!

WTC 2025 Final: ಐಸಿಸಿ ನಿಯಮಗಳ ಪ್ರಕಾರ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದು ಗಂಟೆಯೊಳಗೆ 15 ಓವರ್​​ಗಳನ್ನು ಮಾಡಬೇಕು. ಗಾಯ ಅಥವಾ ಇನ್ನಿತರ ಕಾರಣಗಳ ಹೊರತಾಗಿ ಹದಿನೈದಕ್ಕಿಂತ ಕಡಿಮೆ ಓವರ್​ಗಳನ್ನು ಎಸೆದರೆ ಪೆನಾಲ್ಟಿ ವಿಧಿಸಲಾಗುತ್ತದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂತಹದೊಂದು ಪವಾಡ ನಡೆದರೆ ಶ್ರೀಲಂಕಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on:Jan 07, 2025 | 10:32 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುವುದು ಖಚಿತವಾಗಿದೆ. ಈ ಖಚಿತತೆಯ ಹೊರತಾಗಿಯೂ ಶ್ರೀಲಂಕಾ ತಂಡಕ್ಕೆ ಫೈನಲ್​ಗೆ ಎಂಟ್ರಿ ಕೊಡಲು ಇನ್ನೂ ಅವಕಾಶವೊಂದಿದೆ. ಆದರೆ ಈ ಅವಕಾಶವನ್ನು ಸೃಷ್ಟಿಸಬೇಕಿರುವುದು ಶ್ರೀಲಂಕಾ ತಂಡ. ಇದರ ಜೊತೆಗೆ ಆಸ್ಟ್ರೇಲಿಯಾ ದೊಡ್ಡ ತಪ್ಪೊಂದನ್ನು ಮಾಡುವುದು ಅನಿವಾರ್ಯ.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅಂಕ ಪಟ್ಟಿಯಲ್ಲಿ 69.44% ಅಂಕಗಳೊಂದಿಗೆ ಸೌತ್ ಆಫ್ರಿಕಾ ಅಗ್ರಸ್ಥಾನ ಅಲಂಕರಿಸಿದೆ. ಇನ್ನು 63.73% ಹೊಂದಿರುವ ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಈ ಮೂಲಕ ಉಭಯ ತಂಡಗಳು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಇಲ್ಲಿ ಆಸ್ಟ್ರೇಲಿಯಾ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಪಂದ್ಯಗಳು ಮುಗಿದಿಲ್ಲ ಎಂಬುದು ವಿಶೇಷ.

2 / 5
ಅಂದರೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯನ್ನು ಶ್ರೀಲಂಕಾ ತಂಡವು 2-0 ಅಂತರದಿಂದ ಗೆದ್ದುಕೊಂಡರೆ, ಆಸ್ಟ್ರೇಲಿಯಾ ತಂಡದ ಅಂಕ 57.02% ಗೆ ಇಳಿಯಲಿದೆ. ಇದರಿಂದ ಲಂಕಾ ಪಡೆ ಫೈನಲ್​ಗೆ ಅರ್ಹತೆ ಪಡೆಯುವುದಿಲ್ಲ. ಬದಲಾಗಿ ಈ ಎರಡೂ ಮ್ಯಾಚ್​ಗಳಲ್ಲಿ ಆಸ್ಟ್ರೇಲಿಯಾ ತಂಡದಿಂದ ದೊಡ್ಡ ತಪ್ಪು ನಡೆಯಬೇಕು. ಅದೇನೆಂದರೆ....

3 / 5
ಸ್ಲೋ ಓವರ್ ರೇಟ್. ಶ್ರೀಲಂಕಾ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಸ್ಲೋ ಓವರ್ ರೇಟ್ ತಪ್ಪು ಮಾಡಿದರೆ ಕನಿಷ್ಠ 8 ಅಂಕಗಳನ್ನು ಕಳೆದುಕೊಳ್ಳುವುದು ಖಚಿತ. ಇದರಿಂದ ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕಗಳಲ್ಲೂ ಬದಲಾವಣೆ ಕಂಡು ಬರಲಿದೆ. ಅಂದರೆ ಆಸ್ಟ್ರೇಲಿಯಾ ತಂಡ 2-0 ಅಂತರದಿಂದ ಸರಣಿ ಸೋಲಿನ ಜೊತೆಗೆ ಎರಡು ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿದರೆ, ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಶ್ರೀಲಂಕಾ ಫೈನಲ್​ಗೆ ಅರ್ಹತೆ ಪಡೆಯಬಹುದು.

4 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಇಂತಹದೊಂದು ತಪ್ಪುಗಳು ನಡೆದಿದೆಯಾ ಎಂದು ಕೇಳಿದರೆ, ಖಂಡಿತವಾಗಿಯೂ ನಡೆದಿದೆ. 2023 ರಲ್ಲಿ ಇಂಗ್ಲೆಂಡ್ ತಂಡವು ಸ್ಲೋ ಓವರ್ ರೇಟ್ ಕಾರಣ ಒಟ್ಟು 19 ಅಂಕಗಳನ್ನು ಕಳೆದುಕೊಂಡಿತ್ತು. ಇದರಿಂದಾಗಿ ಇಂಗ್ಲೆಂಡ್​ಗೆ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವ ಅವಕಾಶ ಕೈ ತಪ್ಪಿತ್ತು. ಹಾಗೆಯೇ ಆಸ್ಟ್ರೇಲಿಯಾ ತಂಡ ಸ್ಲೋ ಓವರ್ ರೇಟ್ ಕಾರಣ 10 ಅಂಕಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಶ್ರೀಲಂಕಾ ತಂಡವನ್ನು ಅದೃಷ್ಟ ಕೈ ಹಿಡಿದರೆ ಫೈನಲ್​​ಗೆ ಪ್ರವೇಶಿಸಬಹುದು.

5 / 5

Published On - 10:32 am, Tue, 7 January 25

Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ