WTC 2025: ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಭಾರಿ ಕುಸಿತ ಕಂಡ ಇಂಗ್ಲೆಂಡ್- ಆಸ್ಟ್ರೇಲಿಯಾ..!
Updated WTC Points Table: ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಉಭಯ ತಂಡಗಳಿಗೆ ದಂಡ ವಿಧಿಸಲಾಗಿದ್ದು, ಇದರಿಂದ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಉಭಯ ತಂಡಗಳು ಕುಸಿತ ಕಂಡಿವೆ.
1 / 9
ಐದು ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯನ್ನು ಡ್ರಾದಲ್ಲಿ ಅಂತ್ಯಗೊಳಿಸಿರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳಿಗೆ ಐಸಿಸಿ ಭಾರಿ ದಂಡದ ಬರೆಯನ್ನೇ ಎಳೆದಿದೆ. ವಾಸ್ತವವಾಗಿ ಈ ಉಭಯ ತಂಡಗಳು ಆ್ಯಶಸ್ ಟೆಸ್ಟ್ ಸರಣಿಯೊಂದಿಗೆ ಮೂರನೇ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ಅಭಿಯಾನವನ್ನು ಆರಂಭಿಸಿದ್ದವು.
2 / 9
ಇದೀಗ ಟೆಸ್ಟ್ ಚಾಂಪಿಯನ್ಶಿಪ್ ಮೊದಲ ಸರಣಿಯಲ್ಲೇ ಉಭಯ ತಂಡಗಳಿಗೆ ಐಸಿಸಿ ವಿಧಿಸಿರುವ ದಂಡ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವಾಸ್ತವವಾಗಿ ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಉಭಯ ತಂಡಗಳಿಗೆ ದಂಡ ವಿಧಿಸಲಾಗಿದ್ದು, ಇದರಿಂದ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಉಭಯ ತಂಡಗಳು ಕುಸಿತ ಕಂಡಿವೆ.
3 / 9
ನಾಲ್ಕನೇ ಟೆಸ್ಟ್‌ನಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಆಸ್ಟ್ರೇಲಿಯಾ ತಂಡಕ್ಕೆ ಗೆಲುವಿನ ಶೇಕಡಾವಾರು ಅಂಕಗಳಿಂದ 10 ಅಂಕಗಳನ್ನು ಕಡಿತಗೊಳಿಸಲಾಗಿದೆ.
4 / 9
ಮತ್ತೊಂದೆಡೆ, ಆಸ್ಟ್ರೇಲಿಯಾಕ್ಕೆ ಹೋಲಿಸಿದರೆ, ಇಂಗ್ಲೆಂಡ್‌ಗೆ ಹೆಚ್ಚು ಹೊಡೆತ ಬಿದ್ದಿದೆ. ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ 19 ಅಂಕಗಳನ್ನು ಗೆಲುವಿನ ಶೇಕಡಾವಾರು ಅಂಕಗಳಿಂದ ಕಡಿತಗೊಳಿಸಲಾಗಿದೆ. ಇದೀಗ ಈ ತಂಡಗಳ ದಂಡದ ಪರಿಣಾಮದಿಂದ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲೂ ಬದಲಾವಣೆ ಕಂಡಿದೆ.
5 / 9
ಮೂರನೇ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ಅಭಿಯಾನವನ್ನು ಆರಂಭಿಸಿರುವ ಪಾಕಿಸ್ತಾನ ಆಡಿರುವ ಎರಡು ಪಂದ್ಯಗಳಲ್ಲಿ ಲಂಕಾ ವಿರುದ್ಧ ಜಯಗಳಿಸಿ 24 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.
6 / 9
ವೆಸ್ಟ್ ಇಂಡೀಸ್ ವಿರುದ್ದ ಆಡಿದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿರುವ ಟೀಂ ಇಂಡಿಯಾ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
7 / 9
ಇನ್ನು ಆ್ಯಶಸ್ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದ್ದರೂ, ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿರುವ ಆಸ್ಟ್ರೇಲಿಯಾ 18 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ (ಗೆಲುವಿನ ಶೇಕಡವಾರು ಟೀಂ ಇಂಡಿಯಾಕ್ಕಿಂತ ಕಡಿಮೆ ಇದೆ).
8 / 9
ಭಾರತದ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳಿಸಿದ ವೆಸ್ಟ್ ಇಂಡೀಸ್ ತಂಡ 4 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ.
9 / 9
ಇನ್ನು ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯನ್ನು 2-2 ರಿಂದ ಸಮಬಲಗೊಳಿಸಿದ ಇಂಗ್ಲೆಂಡ್ ತಂಡ 9 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ (ಗೆಲುವಿನ ಶೇಕಡವಾರು ವೆಸ್ಟ್ ಇಂಡೀಸ್ಗಿಂತ ಕಡಿಮೆ ಇದೆ)