AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್​ನಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೃಷ್ಟಿಯಾಗುವ 5 ದಾಖಲೆಗಳಿವು

Virat Kohli: ಕೊಹ್ಲಿ ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ 24 ಪಂದ್ಯಗಳ 42 ಇನ್ನಿಂಗ್ಸ್‌ಗಳಲ್ಲಿ ಎಂಟು ಶತಕಗಳನ್ನು ಒಳಗೊಂಡಂತೆ 48.26 ಸರಾಸರಿಯಲ್ಲಿ 1979 ರನ್ ಗಳಿಸಿದ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ.

ಪೃಥ್ವಿಶಂಕರ
|

Updated on: Jun 07, 2023 | 7:49 PM

Share
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಬ್ಯಾಟಿಂಗ್ ಆರಂಭಿಸಿರುವ ಆಸೀಸ್ ಕೂಡ ಉತ್ತಮ ಲಯದಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಇದೀಗ ಆಸೀಸ್ ತಂಡವನ್ನು ಬೇಗ ಆಲೌಟ್ ಮಾಡಿ ಬ್ಯಾಟಿಂಗ್ ಆರಂಭಿಸಬೇಕೆಂದುಕೊಂಡಿರುವ ಟೀಂ ಇಂಡಿಯಾ ಪರ ಕಿಂಗ್ ಕೊಹ್ಲಿ 5 ದಾಖಲೆ ಮುರಿಯುವ ತವಕದಲ್ಲಿದ್ದಾರೆ.

1 / 7
ಕೊಹ್ಲಿ ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ 24 ಪಂದ್ಯಗಳ 42 ಇನ್ನಿಂಗ್ಸ್‌ಗಳಲ್ಲಿ ಎಂಟು ಶತಕಗಳನ್ನು ಒಳಗೊಂಡಂತೆ 48.26 ಸರಾಸರಿಯಲ್ಲಿ 1979 ರನ್ ಗಳಿಸಿದ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಕೊನೆಯ ಬಾರಿಗೆ ಅಹಮದಾಬಾದ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವನ್ನಾಡಿದ್ದ ಕೊಹ್ಲಿ 186 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಇದೀಗ ಫೈನಲ್‌ ಪಂದ್ಯದಲ್ಲೂ ಕೊಹ್ಲಿ ಕೆಲವು ದಾಖಲೆಗಳನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

2 / 7
ವಿರಾಟ್ ಕೊಹ್ಲಿ ಪ್ರಸ್ತುತ ಐಸಿಸಿ ನಾಕೌಟ್‌ನ 16 ಪಂದ್ಯಗಳ 15 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕಗಳು ಸೇರಿದಂತೆ 620 ರನ್ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ (14 ಇನ್ನಿಂಗ್ಸ್‌ಗಳಲ್ಲಿ 657 ರನ್) ಮತ್ತು ರಿಕಿ ಪಾಂಟಿಂಗ್ (18 ಇನ್ನಿಂಗ್ಸ್‌ಗಳಲ್ಲಿ 731 ರನ್) ಅವರನ್ನು ಹಿಂದಿಕ್ಕಲು ಕೊಹ್ಲಿಗೆ 38 ರನ್‌ಗಳ ಅಗತ್ಯವಿದೆ.

3 / 7
ವಿರಾಟ್ ಕೊಹ್ಲಿ ಪ್ರಸ್ತುತ ಐಸಿಸಿ ಈವೆಂಟ್‌ನ ನಾಕೌಟ್ ಹಂತದಲ್ಲಿ 15 ಪಂದ್ಯಗಳನ್ನು ಆಡಿದ್ದು, ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿ ನಂತರ ಮೂರನೇ ಸ್ಥಾನದಲ್ಲಿದ್ದಾರೆ. ಸದ್ಯ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ ಭಾರತದ ಪರ ಅತಿ ಹೆಚ್ಚು ಐಸಿಸಿ ಫೈನಲ್ ಪಂದ್ಯಗಳನ್ನಾಡಿದ ವಿಚಾರದಲ್ಲಿ ತೆಂಡೂಲ್ಕರ್ ಮತ್ತು ಧೋನಿ ಅವರನ್ನು ಹಿಂದಿಕ್ಕುವುದರೊಂದಿಗೆ ಯುವರಾಜ್ ಸಿಂಗ್ (17 ಪಂದ್ಯಗಳು) ನಂತರ 2ನೇ ಸ್ಥಾನ ಕಾಯ್ದುಕೊಳ್ಳಲಿದ್ದಾರೆ.

4 / 7
ಮಾಜಿ ನಾಯಕ ಮತ್ತು ಹಾಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇಂಗ್ಲೆಂಡ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ದ್ರಾವಿಡ್ ಇಂಗ್ಲೆಂಡ್‌ನಲ್ಲಿ 46 ಪಂದ್ಯಗಳಲ್ಲಿ 55 ಸರಾಸರಿಯಲ್ಲಿ 2,645 ರನ್ ಗಳಿಸಿದ್ದಾರೆ. ದ್ರಾವಿಡ್ ನಂತರದ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ 43 ಪಂದ್ಯಗಳಲ್ಲಿ 2,626 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ 56 ಪಂದ್ಯಗಳಲ್ಲಿ 2,574 ರನ್ ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ ಮತ್ತು ಅಗ್ರಸ್ಥಾನಕ್ಕೆ ಏರಲು ಮತ್ತು ದ್ರಾವಿಡ್ ಮತ್ತು ತೆಂಡೂಲ್ಕರ್ ಇಬ್ಬರನ್ನೂ ಹಿಂದಿಕ್ಕಲು ಕೊಹ್ಲಿಗೆ ಇನ್ನೂ 72 ರನ್ ಅಗತ್ಯವಿದೆ.

5 / 7
ಟೆಸ್ಟ್ ಕ್ರಿಕೆಟ್‌ನಲ್ಲಿ ಒಬ್ಬ ಬೌಲರ್ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ವಿಚಾರದಲ್ಲಿ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ವಿರುದ್ಧ 511 ರನ್ ಗಳಿಸಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಚೇತೇಶ್ವರ ಪೂಜಾರ ಲಿಯಾನ್ ವಿರುದ್ಧ 570 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (ಸಯೀದ್ ಅಜ್ಮಲ್ ವಿರುದ್ಧ 531 ರನ್) ಮತ್ತು ಸ್ಟೀವ್ ಸ್ಮಿತ್ (ಸ್ಟುವರ್ಟ್ ಬ್ರಾಡ್ ವಿರುದ್ಧ 520 ರನ್) ನಂತರದ ಸ್ಥಾನದಲ್ಲಿದ್ದಾರೆ. ಪೂಜಾರ ತನ್ನ ಮುನ್ನಡೆಯನ್ನು ವಿಸ್ತರಿಸಲು ಅವಕಾಶವನ್ನು ಹೊಂದಿದ್ದರೂ, ಕೊಹ್ಲಿಗೆ ಸಂಗಕ್ಕಾರ ಮತ್ತು ಸ್ಮಿತ್ ಅವರನ್ನು ಹಿಮ್ಮೆಟ್ಟಿಸುವ ಅವಕಾಶವಿದೆ.

6 / 7
ಟೆಸ್ಟ್ ಕ್ರಿಕೆಟ್‌ನಲ್ಲಿ 950 ಬೌಂಡರಿಗಳನ್ನು ಪೂರ್ಣಗೊಳಿಸುವ ಸನಿಹದಲ್ಲಿರುವ ಕೊಹ್ಲಿ ಸದ್ಯ ರೆಡ್ ಬಾಲ್ ಕ್ರಿಕೆಟ್‌ನಲ್ಲಿ 941 ಬೌಂಡರಿಗಳನ್ನು ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಇನ್ನು ಕೊಹ್ಲಿ 9 ಬೌಂಡರಿ ಬಾರಿಸಿದರೆ, ವಿವಿಎನ್ ರಿಚರ್ಡ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಕೆವಿನ್ ಪೀಟರ್ಸನ್ ಅವರ ಪಟ್ಟಿಗೆ ಕೊಹ್ಲಿ ಸೇರಿಕೊಳ್ಳಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 2058 ಬೌಂಡರಿಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!