WTC Final 2023: ಆಪದ್ಬಾಂಧವ ಅಜಿಂಕ್ಯ; ಭಾರತದ ಪರ ಇತಿಹಾಸ ಸೃಷ್ಟಿಸಿದ ರಹಾನೆ..!

Updated on: Jun 09, 2023 | 4:27 PM

Ajinkya Rahane, WTC Final 2023: 18 ತಿಂಗಳ ನಂತರ ರಹಾನೆ ಟೆಸ್ಟ್ ಪಂದ್ಯ ಆಡುತ್ತಿರುವ ರಹಾನೆ, ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು.

1 / 5
ಕೇವಲ 71 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿರುವ ಟೀಂ ಇಂಡಿಯಾದ ಆಪದ್ಬಾಂಧವ ಅಜಿಂಕ್ಯ ರಹಾನೆ, ಆಸೀಸ್ ವೇಗಿಗಳ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿ ಅವಶ್ಯಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ಕೇವಲ 71 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿರುವ ಟೀಂ ಇಂಡಿಯಾದ ಆಪದ್ಬಾಂಧವ ಅಜಿಂಕ್ಯ ರಹಾನೆ, ಆಸೀಸ್ ವೇಗಿಗಳ ಮಾರಕ ದಾಳಿಯನ್ನು ಸಮರ್ಥವಾಗಿ ಎದುರಿಸಿ ಅವಶ್ಯಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

2 / 5

ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಅವರಂತಹ ಬ್ಯಾಟ್ಸ್‌ಮನ್‌ಗಳು ಆಸ್ಟ್ರೇಲಿಯಾ ವಿರುದ್ಧ ಮಕಾಡೆ ಮಲಗಿದಾಗ ಓವಲ್ ಮೈದಾನದಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಮಾಡುತ್ತಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್‌ನ ಮೂರನೇ ದಿನ 92 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದಾರೆ.

3 / 5

18 ತಿಂಗಳ ನಂತರ ರಹಾನೆ ಟೆಸ್ಟ್ ಪಂದ್ಯ ಆಡುತ್ತಿರುವ ರಹಾನೆ, ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ 50 ರನ್ ಪೂರೈಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 5

ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಹಾನೆ, ಎರಡೂ ಇನ್ನಿಂಗ್ಸ್‌ಗಳಲ್ಲಿ ಫ್ಲಾಪ್ ಆಗಿದ್ದರು. ಇದಾದ ಬಳಿಕ ಅವರನ್ನು ತಂಡದಿಂದ ಕೈಬಿಡಲಾಗಿತ್ತು.

5 / 5

ಆದರೆ ಈಗ ಬಹಳ ದಿನಗಳ ನಂತರ ಭಾರತ ತಂಡಕ್ಕೆ ಮರಳಿರುವ ರಹಾನೆ ಅರ್ಧಶತಕ ಸಿಡಿಸಿದಲ್ಲದೆ ಇದಕ್ಕೂ ಮುನ್ನ ರವೀಂದ್ರ ಜಡೇಜಾ ಅವರೊಂದಿಗೆ 71 ರನ್ ಜೊತೆಯಾಟವಾಡಿದರು. ಇದಾದ ಬಳಿಕ ಶಾರ್ದೂಲ್ ಠಾಕೂರ್ ಜೊತೆ ಉತ್ತಮ ಜೊತೆಯಾಟವಾಡುತ್ತಿದ್ದಾರೆ.

Published On - 4:25 pm, Fri, 9 June 23

Loading...
Unable to load recommendations.
Follow Us