AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Steve Smith: ಭರ್ಜರಿ ಸೆಂಚುರಿಯೊಂದಿಗೆ 7 ದಾಖಲೆ ಬರೆದ ಸ್ಟೀವ್ ಸ್ಮಿತ್

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 08, 2023 | 9:58 PM

WTC Final 2023: ಲಂಡನ್​​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 10
ಈ ಪಂದ್ಯದಲ್ಲಿ ಟಾಸ್ ಸೋತರೂ ಆಸ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಅಲ್ಲದೆ ತಂಡವು 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ 268 ಎಸೆತಗಳಲ್ಲಿ 121 ರನ್​ ಬಾರಿಸಿ ಶಾರ್ದೂಲ್ ಠಾಕೂರ್​ಗೆ ವಿಕೆಟ್ ಒಪ್ಪಿಸಿದ್ದರು.

2 / 10
ವಿಶೇಷ ಎಂದರೆ ಈ ಶತಕದೊಂದಿಗೆ ಸ್ಟೀವ್ ಸ್ಮಿತ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 10
ಟೀಮ್ ಇಂಡಿಯಾ ವಿರುದ್ಧ ಅತೀ ಹೆಚ್ಚು ಶತಕ: ಓವಲ್ ಮೈದಾನದಲ್ಲಿ ಶತಕ ಸಿಡಿಸುವುದರೊಂದಿಗೆ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್​ನ ಜೋ ರೂಟ್ ಭಾರತದ ವಿರುದ್ಧ 9 ಶತಕ ಬಾರಿಸಿದ್ದರು. ಇದೀಗ ಸ್ಮಿತ್ ಕೂಡ 9 ಶತಕ ಸಿಡಿಸಿ ರೂಟ್​ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 10
ಆಸೀಸ್ ಶತಕ ವೀರ: ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಸ್ಟ್ರೇಲಿಯಾ ಆಟಗಾರ ಎಂಬ ದಾಖಲೆ ಸ್ಮಿತ್ ಪಾಲಾಗಿದೆ. ಇದಕ್ಕೂ ಮುನ್ನ ರಿಕಿ ಪಾಂಟಿಂಗ್ ಭಾರತದ ವಿರುದ್ಧ 8 ಶತಕ ಬಾರಿಸಿದ್ದರು. ಇದೀಗ ಸ್ಮಿತ್ 9 ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 10
ಆಸ್ಟ್ರೇಲಿಯಾದ ಸೆಂಚುರಿ ಸ್ಟಾರ್: ಈ ಶತಕದೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ (31) ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ (41) ಹಾಗೂ ಸ್ಟೀವ್ ವಾ (32) ಮೊದಲೆರಡು ಸ್ಥಾನಗಳಲ್ಲಿದ್ದಾರೆ.

6 / 10
ಇಂಗ್ಲೆಂಡ್​ನಲ್ಲಿನ ಸೆಂಚುರಿ ಸರದಾರ: ಓವಲ್​ ಮೈದಾನದಲ್ಲಿ ಶತಕ ಪೂರೈಸುವುದರೊಂದಿಗೆ ಇಂಗ್ಲೆಂಡ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ವಿದೇಶಿ ಆಟಗಾರರ ಪಟ್ಟಿಯಲ್ಲಿ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ದಂತಕಥೆ ಡಾನ್ ಬ್ರಾಡ್ಮನ್ (11) ಅಗ್ರಸ್ಥಾನದಲ್ಲಿದ್ದಾರೆ, ಇದೀಗ 7 ಶತಕಗಳೊಂದಿಗೆ ಸ್ಮಿತ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.

7 / 10
ರನ್ ಸರದಾರ: ಈ ಶತಕದೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಟೀವ್ ಸ್ಮಿತ್ 2000 ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಿಕಿ ಪಾಂಟಿಂಗ್ (2555) ಹಾಗೂ ಮೈಕಲ್ ಕ್ಲಾರ್ಕ್​ (2049) ಈ ಸಾಧನೆ ಮಾಡಿದ್ದರು.

8 / 10
ಓವಲ್​ನ ಶತಕ ವೀರ: ಓವಲ್ ಮೈದಾನದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಸ್ಟ್ರೇಲಿಯಾ ಆಟಗಾರ ಎಂಬ ದಾಖಲೆ ಕೂಡ ಸ್ಮಿತ್ ಪಾಲಾಗಿದೆ. ಸ್ಮಿತ್ ಈ ಮೈದಾನದಲ್ಲಿ ಇದುವರೆಗೆ 3 ಶತಕಗಳನ್ನು ಬಾರಿಸಿದ್ದಾರೆ.

9 / 10
ಅತೀ ಹೆಚ್ಚು ಶತಕ: ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 11 ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, 9 ಶತಕದೊಂದಿಗೆ ಸ್ಟೀವ್ ಸ್ಮಿತ್ 2ನೇ ಸ್ಥಾನಕ್ಕೇರಿದ್ದಾರೆ.

10 / 10
Follow us
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್

ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು

ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು

ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ