- Kannada News Photo gallery Cricket photos Kannada News | WTC Final 2023: Cricket Australia's WTC Team of the Tournament
WTC ಬೆಸ್ಟ್ ಇಲೆವೆನ್: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ
WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.
Updated on: Jun 04, 2023 | 7:21 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಆಫ್ ದಿ ಟೂರ್ನಮೆಂಟ್ ಅನ್ನು ಪ್ರಕಟಿಸಿದೆ. 2021 ರಿಂದ 2023ರವರೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಈ ತಂಡಕ್ಕಾಗಿ ಆಯ್ಕೆ ಮಾಡಲಾಗಿದೆ.

ವಿಶೇಷ ಎಂದರೆ ಆಸ್ಟ್ರೇಲಿಯಾ ಪ್ರಕಟಿಸಿರುವ ಈ ಬೆಸ್ಟ್ ಇಲೆವೆನ್ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಇಬ್ಬರು ಆಲ್ರೌಂಡರ್ಗಳು ಒಬ್ಬರು ವಿಕೆಟ್ ಕೀಪರ್ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಇದಾಗ್ಯೂ ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಹಾಗೆಯೇ ಬೌಲಿಂಗ್ ವಿಭಾಗದಿಂದ ಯಾವುದೇ ವೇಗದ ಬೌಲರ್ ಕೂಡ ಆಯ್ಕೆಯಾಗಿಲ್ಲ.

ಇನ್ನು ಬೆಸ್ಟ್ ಇಲೆವೆನ್ನಲ್ಲಿ ಪ್ರಸ್ತುತ ತಂಡದಿಂದ ಹೊರಗುಳಿದಿರುವ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ಕಳೆದ 2 ವರ್ಷಗಳಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪಂತ್ 43.41 ಸರಾಸರಿಯಲ್ಲಿ 868 ರನ್ಗಳಿಸಿ ಮಿಂಚಿದ್ದರು. ಹೀಗಾಗಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಬೆಸ್ಟ್ ಇಲೆವೆನ್ ಈ ಕೆಳಗಿನಂತಿದೆ...

1- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)

2- ದಿಮುತ್ ಕರುಣರತ್ನೆ (ಶ್ರೀಲಂಕಾ)

3- ಬಾಬರ್ ಆಝಂ (ಪಾಕಿಸ್ತಾನ್)

3- ಬಾಬರ್ ಆಝಂ (ಪಾಕಿಸ್ತಾನ್)

5- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

6- ರವೀಂದ್ರ ಜಡೇಜಾ- ಆಲ್ರೌಂಡರ್ (ಭಾರತ)

7- ರವಿಚಂದ್ರನ್ ಅಶ್ವಿನ್- ಆಲ್ರೌಂಡರ್ (ಭಾರತ)

8- ರಿಷಭ್ ಪಂತ್- ವಿಕೆಟ್ ಕೀಪರ್ (ಭಾರತ)

9- ಪ್ಯಾಟ್ ಕಮಿನ್ಸ್- ಆಲ್ರೌಂಡರ್ (ಆಸ್ಟ್ರೇಲಿಯಾ)

10- ಕಗಿಸೊ ರಬಾಡ (ಸೌತ್ ಆಫ್ರಿಕಾ)

11- ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)

ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ.
