Updated on: May 31, 2023 | 2:53 PM
IPL 2023: ಐಪಿಎಲ್ ಸೀಸನ್ 16 ಮುಕ್ತಾಯವಾಗಿದೆ. ಬಹುತೇಕ ಆಟಗಾರರು ತಮ್ಮ ರಾಷ್ಟ್ರೀಯ ತಂಡದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರರು ಕೂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.
ಇದರ ನಡುವೆ ದಿನೇಶ್ ಕಾರ್ತಿಕ್ ಕೂಡ ಮತ್ತೆ ಕ್ರಿಕೆಟ್ ಲೋಕಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಕಾಮೆಂಟೇಟರ್ ಆಗಿ ಎಂಬುದು ವಿಶೇಷ.
ಹೌದು, ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ ಉಳಿದಿರುವ ದಿನೇಶ್ ಕಾರ್ತಿಕ್ ಮತ್ತೆ ಕಾಮೆಂಟ್ರಿ ಮಾಡಲು ಸಜ್ಜಾಗಿದ್ದಾರೆ. ಅದು ಕೂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಎಂಬುದು ವಿಶೇಷ.
ಈ ಹಿಂದೆಯೇ ಕಾಮೆಂಟೇಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಡಿಕೆ ಐಪಿಎಲ್ನಲ್ಲಿ ಮುಂದುವರೆದಿದ್ದರು. ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಪರ 13 ಇನಿಂಗ್ಸ್ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ.
ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ, ನೀವು ಫುಲ್ ಟೈಮ್ ಕಾಮೆಂಟೇಟರ್ ಆಗುವುದು ಉತ್ತಮ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಡಿಕೆ ವೀಕ್ಷಕ ವಿವರಣೆಗಾರನಾಗಿ ಮತ್ತೆ ಕಾಣಿಸಿಕೊಳ್ಳಲು ಮುಂದಾಗಿದ್ದಾರೆ.
ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರವೇ ಉಳಿದಿರುವ 37 ವರ್ಷದ ದಿನೇಶ್ ಕಾರ್ತಿಕ್ ಅವರನ್ನು ಆರ್ಸಿಬಿ ಫ್ರಾಂಚೈಸಿ ಮುಂದಿನ ಸೀಸನ್ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.
ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.