- Kannada News Photo gallery Cricket photos Kannada News | WTC Final 2023: Harbhajan Singh's Playing XI
WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್
WTC Final 2023: ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
Updated on: Jun 01, 2023 | 10:29 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡ ಸೆಣಸಲಿದೆ.

ಇತ್ತ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಟೀಮ್ ಇಂಡಿಯಾ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಇಲ್ಲಿ ಅಂತಿಮ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ.

ಏಕೆಂದರೆ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಬದಲಿಗೆ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಕುತೂಹಲ ಒಂದೆಡೆಯಾದರೆ, ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರಿಗೆ ವಹಿಸಲಿದೆ ಅನ್ನೋ ಕುತೂಹಲ ಮತ್ತೊಂದೆಡೆ.

ಈ ಕುತೂಹಲವನ್ನು ತಣಿಸುವಂತೆ ಇದೀಗ ಟೀಮ್ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದ್ದಾರೆ. ಈ ಆಡುವ ಬಳಗದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ. ಅದರಂತೆ ಹರ್ಭಜನ್ ಸಿಂಗ್ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

1- ರೋಹಿತ್ ಶರ್ಮಾ (ನಾಯಕ)

2- ಶುಭಮನ್ ಗಿಲ್

3- ಚೇತೇಶ್ವರ ಪೂಜಾರ

4- ವಿರಾಟ್ ಕೊಹ್ಲಿ

5- ಅಜಿಂಕ್ಯ ರಹಾನೆ

6- ಇಶಾನ್ ಕಿಶನ್ (ವಿಕೆಟ್ ಕೀಪರ್)

7- ರವೀಂದ್ರ ಜಡೇಜಾ

8- ಆರ್. ಅಶ್ವಿನ್ ಅಥವಾ ಶಾರ್ದೂಲ್ ಠಾಕೂರ್

9- ಮೊಹಮ್ಮದ್ ಶಮಿ

10- ಮೊಹಮ್ಮದ್ ಸಿರಾಜ್

11- ಉಮೇಶ್ ಯಾದವ್.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).



















