Asia Cup 2023: ಓವಲ್ ಮೈದಾನದಲ್ಲಿ ರೋಹಿತ್ ಶರ್ಮಾ ದಾಖಲೆ ಹೇಗಿದೆ ಗೊತ್ತಾ?
Rohit Sharma: 2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಟೆಸ್ಟ್ ಆಡಿದ್ದರು.
1 / 5
ಜೂನ್ 7 ರಿಂದ ಓವಲ್ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯುತ್ತಿದ್ದರೆ, ಇತ್ತ ಪ್ಯಾಟ್ ಕಮಿನ್ಸ್ ನೇತೃತ್ವದಲ್ಲಿ ಆಸೀಸ್ ಆಡುತ್ತಿದೆ. ನಾಯಕನಾಗಿ ರೋಹಿತ್ಗೆ ಈ ಪಂದ್ಯ ಬಹಳ ಮುಖ್ಯವಾಗಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ರೋಹಿತ್ ಟೆಸ್ಟ್ ನಾಯಕತ್ವದ ಭವಿಷ್ಯ ನಿಂತಿದೆ.
2 / 5
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಓವಲ್ ಮೈದಾನದಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ನೋಡುವುದಾದರೆ, ಆಟಗಾರನಾಗಿ ಓವಲ್ ಮೈದಾನದಲ್ಲಿ ಏಕೈಕ ಪಂದ್ಯವನ್ನಾಡಿರುವ ರೋಹಿತ್, ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ.
3 / 5
2021 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಟೆಸ್ಟ್ ಆಡಿದ್ದರು. ಉಭಯ ತಂಡಗಳ ನಡುವಿನ ಆ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 256 ಎಸೆತಗಳನ್ನು ಎದುರಿಸಿದ್ದ ರೋಹಿತ್ 14 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 127 ರನ್ ಬಾರಿಸಿದ್ದರು.
4 / 5
ರೋಹಿತ್ ಶರ್ಮಾ ಅವರ ನಿರ್ಣಾಯಕ ಇನ್ನಿಂಗ್ಸ್ನಿಂದ ಭಾರತ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಕಲೆಹಾಕಿತು. ಕೊನೆಯ ದಿನದಂದು ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 210 ರನ್‌ಗಳಿಗೆ ಆಲೌಟ್ ಮಾಡಿದರು. ಅಂತಿಮವಾಗಿ ಟೀಂ ಇಂಡಿಯಾ 157 ರನ್‌ಗಳಿಂದ ಟೆಸ್ಟ್ ಪಂದ್ಯ ಗೆದ್ದರೆ, ಇತ್ತ ಮ್ಯಾಚ್ ವಿನ್ನಿಂಗ್ಸ್ ಆಡಿದ್ದ ರೋಹಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
5 / 5
ಇನ್ನು ಆಂಗ್ಲರ ನಾಡಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ, 2021 ರ ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ ನಾಲ್ಕು-ಟೆಸ್ಟ್ ಪಂದ್ಯಗಳಲ್ಲಿ 52.27 ರ ಸರಾಸರಿಯಲ್ಲಿ 368 ರನ್ ಕಲೆಹಾಕಿದ್ದರು. ಈಗ ಅದೇ ಪ್ರದರ್ಶನವನ್ನು ನಾಯಕನಾಗಿ ರೋಹಿತ್ ಕಾಂಗರೂಗಳ ವಿರುದ್ಧ ತೋರಿಸಬೇಕಾಗಿದೆ.