WTC Final 2023: ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಸಿಕ್ಕ ಬಹುಮಾನವೆಷ್ಟು? ಭಾರತದ ಪಾಲೆಷ್ಟು? ಇಲ್ಲಿದೆ ವಿವರ
WTC Final 2023 Prize Money: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಐಸಿಸಿಯಿಂದ ಅಪಾರ ಬಹುಮಾನವನ್ನು ಪಡೆದುಕೊಂಡಿದೆ.
1 / 7
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಐಸಿಸಿಯಿಂದ ಅಪಾರ ಬಹುಮಾನವನ್ನು ಪಡೆದುಕೊಂಡಿದೆ.
2 / 7
ಟೀಂ ಇಂಡಿಯಾವನ್ನು ಮಣಿಸಿ ಚಾಂಪಿಯನ್ಪಟ್ಟಕ್ಕೇರಿದ ಆಸ್ಟ್ರೇಲಿಯಾ ಬರೋಬ್ಬರಿ 13.22 ಕೋಟಿ ರೂ. ಗಳನ್ನು ಬಹುಮಾನವಾಗಿ ಪಡೆದುಕೊಂಡಿದೆ.
3 / 7
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಸತತ ಎರಡನೇ ಬಾರಿಗೆ ಸೋತು ರನ್ನರ್ ಅಪ್ ಎನಿಸಿಕೊಂಡಿರುವ ಟೀಂ ಇಂಡಿಯಾ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.
4 / 7
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.
5 / 7
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.
6 / 7
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.
7 / 7
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.