
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್ ಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದಾಗ್ಯೂ ಓವಲ್ ಮೈದಾನದಲ್ಲಿ ಭಾರತ ತಂಡದ ಪ್ರದರ್ಶನ ಡ್ರಾಗೆ ಸೀಮಿತವಾಗಿದೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಟೀಮ್ ಇಂಡಿಯಾ ಓವಲ್ ಮೈದಾನದಲ್ಲಿ ಇದುವರೆಗೆ ಒಟ್ಟು 14 ಟೆಸ್ಟ್ ಪಂದ್ಯಗಳನ್ನಾಡಿದೆ. ಇದರಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನು 5 ಮ್ಯಾಚ್ಗಳಲ್ಲಿ ಸೋತರೆ, ಉಳಿದವು ಡ್ರಾನಲ್ಲಿ ಅಂತ್ಯ ಕಂಡಿದ್ದವು.

ಅಂದರೆ ಈ ಪಿಚ್ನಲ್ಲಿ ಭಾರತ ತಂಡವು ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ಇದರ ನಡುವೆ 7 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಬಾರಿ ಡ್ರಾ ಬದಲು ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಬೇಕಾದ ಅನಿವಾರ್ಯತೆಯಿದೆ. ಹೀಗಾಗಿಯೇ ಓವಲ್ನಲ್ಲಿ ಟೀಮ್ ಇಂಡಿಯಾಗೆ ಅಗ್ನಿ ಪರೀಕ್ಷೆ ಎದುರಾಗಲಿದೆ.

ಇನ್ನು ದಿ ಓವಲ್ ಮೈದಾನದ ವಿಶೇಷತೆ ಎಂದರೆ, ಇಲ್ಲಿನ ಪಿಚ್ ಸ್ಪಿನ್ ಬೌಲರ್ಗಳಿಗೆ ನೆರವಾಗಲಿದೆ. ಇತ್ತ ಟೀಮ್ ಇಂಡಿಯಾದಲ್ಲಿ ವಿಕೆಟ್ ಟೇಕರ್ ಸ್ಪಿನ್ನರ್ಗಳಾಗಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇದ್ದಾರೆ. ಹೀಗಾಗಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಓವಲ್ ಮೈದಾನದ ಪಿಚ್ ನಾಲ್ಕನೇ ದಿನದಾಟದಿಂದ ಸ್ಪಿನ್ ಬೌಲರ್ಗಳಿಗೆ ನೆರವಾಗಲಿದೆ ಎಂದು ಆಸ್ಟ್ರೇಲಿಯಾದ ಪ್ರಮುಖ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಕೂಡ ಅಭಿಪ್ರಾಯಪಟ್ಟಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ನ ನಿರ್ಣಾಯಕ ದಿನದಾಟ ಶುರುವಾಗುವೇ ನಾಲ್ಕನೇ ದಿನದಿಂದ. ಇತ್ತ ಕೊನೆಯ ಎರಡು ದಿನಗಳು ಸ್ಪಿನ್ನರ್ಗಳಿಗೆ ನೆರವಾದರೆ ಆಸ್ಟ್ರೇಲಿಯಾ ಬ್ಯಾಟರ್ಗಳ ವಿರುದ್ಧ ಟೀಮ್ ಇಂಡಿಯಾ ಸ್ಪಿನ್ನರ್ಗಳು ಮೋಡಿ ಮಾಡುವುದನ್ನು ಎದುರು ನೋಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).