AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಫೈನಲ್​ ಪಂದ್ಯಕ್ಕೆ ಗ್ರೀನ್ ಪಿಚ್: ಬ್ಯಾಟರ್​ಗಳಿಗೆ ನಡುಕ ಶುರು..!

WTC Final 2023: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ.

TV9 Web
| Edited By: |

Updated on: Jun 06, 2023 | 7:30 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಾಳೆಯಿಂದ (ಜೂ.7) ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇದೀಗ ಓವಲ್​ ಸ್ಟೇಡಿಯಂನಲ್ಲಿ ಫೈನಲ್​ ಪಂದ್ಯಕ್ಕಾಗಿ ಸಜ್ಜುಗೊಳಿಸಲಾಗಿರುವ ಪಿಚ್​ನ ಮೇಲ್ಮೈ ಅನಾವರಣಗೊಂಡಿದೆ. ಹಸಿರು ಹುಲ್ಲಿನಿಂದ ಕೂಡಿರುವ ಪಿಚ್​ ಇದೀಗ ಟೀಮ್ ಇಂಡಿಯಾ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

2 / 7
ಏಕೆಂದರೆ ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

3 / 7
ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ.

4 / 7
ಇತ್ತ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನೇ ನೆಚ್ಚಿಕೊಂಡಿರುವ ತಂಡ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ವೇಗಿಗಳಾಗಿರುವುದು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಇನ್ನು ಪ್ರಮುಖ ವೇಗಿ ಜಸ್​​ಪ್ರೀತ್ ಬುಮ್ರಾ ಗಾಯದ ಕಾರಣ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

5 / 7
ಆದರೆ ಅತ್ತ ಎಡಗೈ ವೇಗಿಯಾಗಿ ಮಿಚೆಲ್ ಸ್ಟಾರ್ಕ್ ಇದ್ದು, ಬಲಗೈ ವೇಗಿ ಪ್ಯಾಟ್ ಕಮಿನ್ಸ್ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ಸ್ಕಾಟ್ ಬೋಲ್ಯಾಂಡ್​ ಕೂಡ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳಲಿರುವ ಕ್ಯಾಮರೋನ್ ಗ್ರೀನ್ ಕೂಡ ವೇಗದ ಬೌಲರ್.

6 / 7
ಅಂದರೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ. ಈ ಸವಾಲನ್ನು ಮೆಟ್ಟಿ ನಿಂತು ಭಾರತ ತಂಡ ವಿಶ್ವ ಚಾಂಪಿಯನ್ ಆಗಲಿದೆಯಾ ಕಾದು ನೋಡಬೇಕಿದೆ.

7 / 7
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು

ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?