AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: 15 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೂ ಕೊಹ್ಲಿ ದಾಖಲೆ ಮುರಿದ ರೋಹಿತ್ ಶರ್ಮಾ..!

WTC Final 2023: ಐಪಿಎಲ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ರೋಹಿತ್, ಡಬ್ಲ್ಯುಟಿಸಿ ಫೈನಲ್​ನಲ್ಲೂ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟಿದ್ದಾರೆ. ಆದರೆ ಬಾರಿಸಿದ್ದು ಕೇವಲ 15 ರನ್ ಆದರೂ ಡಬ್ಲ್ಯುಟಿಸಿಯಲ್ಲಿ ಭಾರತದ ಪರ ಮಹತ್ವದ ದಾಖಲೆ ಬರೆದಿದ್ದಾರೆ.

ಪೃಥ್ವಿಶಂಕರ
|

Updated on: Jun 08, 2023 | 8:48 PM

Share
ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪಿರುವ ಟೀಂ ಇಂಡಿಯಾ 2ನೇ ಆವೃತ್ತಿಯಲ್ಲೂ ಸೋಲಿನ ಭೀತಿಯಲ್ಲಿದೆ. ಆಸೀಸ್ ನೀಡಿರುವ 469 ರನ್​ಗಳ ಗುರಿ ಬೆನ್ನಟ್ಟಿರುವ ಭಾರತ 50 ರನ್ ಪೂರೈಸುವುದರೊಳಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿದೆ.

1 / 6
ಭಾರತದ ಪರ ಮೊದಲ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಬೇಗನೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇತ್ತೀಚೆಗೆ ಮುಗಿದ ಐಪಿಎಲ್​ನಲ್ಲಿ ಅತ್ಯಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಗಿಲ್, ಈ ಫೈನಲ್​ನಲ್ಲಿ ಅಬ್ಬರಿಸುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 13 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು.

2 / 6
ಇನ್ನು ನಾಯಕನ ಜವಬ್ದಾರಿ ಹೊರಬೇಕಾಗಿದ್ದ ರೋಹಿತ್ ಶರ್ಮಾ ಕೂಡ ತಮ್ಮ ಕಳಪೆ ಫಾರ್ಮ್​ ಅನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲೂ ಮುಂದುವರೆಸಿದ್ದಾರೆ. ಐಪಿಎಲ್​ನಲ್ಲಿ ಅಟ್ಟರ್ ಫ್ಲಾಪ್ ಆಗಿದ್ದ ರೋಹಿತ್, ಡಬ್ಲ್ಯುಟಿಸಿ ಫೈನಲ್​ನಲ್ಲೂ ಕೇವಲ 15 ರನ್​ಗಳಿಗೆ ಬ್ಯಾಟ್ ಎತ್ತಿಟ್ಟಿದ್ದಾರೆ. ಆದರೆ ಬಾರಿಸಿದ್ದು ಕೇವಲ 15 ರನ್ ಆದರೂ ಡಬ್ಲ್ಯುಟಿಸಿಯಲ್ಲಿ ಭಾರತದ ಪರ ಮಹತ್ವದ ದಾಖಲೆ ಬರೆದಿದ್ದಾರೆ.

3 / 6
ಆಸೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 15 ರನ್ ಬಾರಿಸಿದ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಬಾರಿಸಿದ ಆಟಗಾರನ ಸಾಲಿನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಈ ಮುಂಚೆ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ರೋಹಿತ್ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ.

4 / 6
ರೋಹಿತ್​ಗೂ ಮುನ್ನ ವಿರಾಟ್ ಕೊಹ್ಲಿ ಡಬ್ಲ್ಯುಟಿಸಿಯಲ್ಲಿ 1803 ರನ್ ಬಾರಿಸುವುದರೊಂದಿಗೆ ಮೊದಲ ಸ್ಥಾನದಲ್ಲಿದ್ದರು. ಇದೀಗ 1809 ರನ್ ಪೂರೈಸಿರುವ ರೋಹಿತ್ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಆದರೆ ರೋಹಿತ್ ದಾಖಲೆ ಹೆಚ್ಚು ಹೊತ್ತು ಅವರ ಹೆಸರಿನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

5 / 6
ಏಕೆಂದರೆ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಅಜೇಯ 14 ರನ್ ಬಾರಿಸಿ ಆಡುತ್ತಿರುವ ವಿರಾಟ್ ಕೊಹ್ಲಿ ಮತ್ತೊಮ್ಮೆ ಭಾರತದ ಪರ ಅತ್ಯಧಿಕ ರನ್ ಬಾರಿಸಿದ ಆಟಗಾರನೆಂಬ ದಾಖಲೆಯನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ.

6 / 6
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ

ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ

ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್

ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,

ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!

ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು

Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್