WTC Final 2023: ಫೈನಲ್ ಪಂದ್ಯದಲ್ಲಿ ಕೈ ಕೊಡುವ ರೋಹಿತ್ ಶರ್ಮಾ..!

| Updated By: ಝಾಹಿರ್ ಯೂಸುಫ್

Updated on: Jun 05, 2023 | 9:22 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದ್ದು, ಅಂತಿಮ ಹಣಾಹಣಿಯಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

1 / 7
WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಜೂನ್ 7 ರಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಎದುರಿಸಲಿದೆ.

2 / 7
ಏಕೆಂದರೆ ರೋಹಿತ್ ಶರ್ಮಾ ಎಷ್ಟೇ ಅದ್ಭುತ ಫಾರ್ಮ್​ನಲ್ಲಿದ್ದರೂ ಐಸಿಸಿ ಫೈನಲ್​ನಲ್ಲಿ ಕೈ ಕೊಡುವ ಪ್ರವೃತಿ ಹೊಂದಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಕೆಳಗಿನ ಅಂಕಿ ಅಂಶಗಳು.

3 / 7
ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 5 ಐಸಿಸಿ ಫೈನಲ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹಿಟ್​ಮ್ಯಾನ್ 30 ರನ್​ಗಳಿಸಿ ಔಟಾಗಿದ್ದರು.

4 / 7
ಇನ್ನು 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

5 / 7
2015 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲೂ ವಿಫಲರಾಗಿದ್ದರು.

6 / 7
ನ್ಯೂಜಿಲೆಂಡ್ ವಿರುದ್ಧ ನಡೆದ WTC 2021 ರ ಫೈನಲ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 34 ರನ್​ಗಳಿಸಿ ಔಟಾಗಿದ್ದ ರೋಹಿತ್ ಶರ್ಮಾ, 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 30 ರನ್ ಮಾತ್ರ. ಅಂದರೆ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಯಾವುದೇ ಪಂದ್ಯದಲ್ಲೂ ಹಿಟ್​ಮ್ಯಾನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

7 / 7
ಇದೀಗ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಔಟಾಗಿದ್ದಾರೆ.