AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮತ್ತೊಮ್ಮೆ ಕೈ ಕೊಟ್ಟ ರೋಹಿತ್ ಶರ್ಮಾ..!

WTC Final 2023: 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

TV9 Web
| Edited By: |

Updated on: Jun 08, 2023 | 10:30 PM

Share
WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವು 469 ರನ್ ಪೇರಿಸಿದೆ.

1 / 9
ಈ ಬೃಹತ್ ಮೊತ್ತದ ಟಾರ್ಗೆಟ್​​ನೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಮೊದಲಿಗರಾಗಿ ನಿರ್ಗಮಿಸಿದರು. ಇತ್ತ ಹಿಟ್​ಮ್ಯಾನ್ ಔಟಾಗುತ್ತಿದ್ದಂತೆ, ಅತ್ತ ಅಭಿಮಾನಿಗಳು ನಿರ್ಣಾಯಕ ಪಂದ್ಯದಲ್ಲಿ ಕೈಕೊಡುವ ರೋಹಿತ್ ಶರ್ಮಾ ಅವರ ವೈಫಲ್ಯವನ್ನು ಟೀಕಿಸಿದ್ದಾರೆ.

2 / 9
ಏಕೆಂದರೆ ರೋಹಿತ್ ಶರ್ಮಾ ಎಷ್ಟೇ ಅದ್ಭುತ ಫಾರ್ಮ್​ನಲ್ಲಿದ್ದರೂ ಐಸಿಸಿ ಫೈನಲ್​ನಲ್ಲಿ ಕೈ ಕೊಡುವ ಪ್ರವೃತಿ ಹೊಂದಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಕೆಳಗಿನ ಅಂಕಿ ಅಂಶಗಳು.

3 / 9
ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 5 ಐಸಿಸಿ ಫೈನಲ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹಿಟ್​ಮ್ಯಾನ್ 30 ರನ್​ಗಳಿಸಿ ಔಟಾಗಿದ್ದರು.

4 / 9
ಇನ್ನು 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

5 / 9
2015 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲೂ ವಿಫಲರಾಗಿದ್ದರು.

6 / 9
ನ್ಯೂಜಿಲೆಂಡ್ ವಿರುದ್ಧ ನಡೆದ WTC 2021 ರ ಫೈನಲ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 34 ರನ್​ಗಳಿಸಿ ಔಟಾಗಿದ್ದ ರೋಹಿತ್ ಶರ್ಮಾ, 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 30 ರನ್ ಮಾತ್ರ. ಅಂದರೆ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಯಾವುದೇ ಪಂದ್ಯದಲ್ಲೂ ಹಿಟ್​ಮ್ಯಾನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

7 / 9
ಇದೀಗ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಔಟಾಗಿದ್ದಾರೆ.

8 / 9
ಇದಾಗ್ಯೂ ದ್ವಿತೀಯ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ನಾಯಕ ತಂಡಕ್ಕೆ ಆಸರೆಯಾಗಲಿದ್ದಾರಾ ಕಾದು ನೋಡಬೇಕಿದೆ.

9 / 9
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ