- Kannada News Photo gallery Cricket photos WTC Final 2023: Rohit Sharma suffers thumb injury in practice
WTC Final 2023: ಫೈನಲ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾಗೆ ಗಾಯ..!
WTC Final 2023: ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ.
Updated on: Jun 06, 2023 | 5:07 PM

WTC Final 2023: ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಬುಧವಾರದಿಂದ ಆರಂಭವಾಗಲಿರುವ ಈ ಪಂದ್ಯಕ್ಕಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿವೆ.

ಈ ಅಭ್ಯಾಸದ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾಗ ಅವರ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿದೆ. ಇದರ ಬೆನ್ನಲ್ಲೇ ಹಿಟ್ಮ್ಯಾನ್ ಪ್ರಾಕ್ಟೀಸ್ ಅನ್ನು ಅಂತ್ಯಗೊಳಿಸಿದರು.

ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಬುಧವಾರ ಶುರುವಾಗಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

2013 ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆಲ್ಲದಿರುವ ಭಾರತದ ಮುಂದೆ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಅಥವಾ ಡ್ರಾ ಮಾಡಿಕೊಳ್ಳುವ ಚಾಂಪಿಯನ್ ಪಟ್ಟ ಅಲಂಕರಿಸುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಅಂದರೆ ಇಲ್ಲಿ ಪಂದ್ಯವು ಡ್ರಾ ಆದರೆ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ. ಹೀಗಾಗಿ ಟೆಸ್ಟ್ ಮ್ಯಾಚ್ ಫೈನಲ್ನಲ್ಲಿ ಉಭಯ ತಂಡಗಳು ಗೆಲ್ಲಲು ಸಾಧ್ಯವಿಲ್ಲ ಎಂದು ಕಂಡು ಬಂದರೆ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಯತ್ನಿಸಲಿದ್ದಾರೆ. ಹಾಗಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ರೋಚಕತೆಯಿಂದ ಕೂಡಿರಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್ (ಉಪ ನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಮೈಕೆಲ್ ನೆಸರ್.




