AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಓವಲ್​ನಲ್ಲಿ ಶುಭ್​ಮನ್ ಗಿಲ್​ಗೆ ಬಂತು ಮದುವೆ ಪ್ರಪೋಸಲ್; ಫೋಟೋ ನೋಡಿ

Shubman Gill: ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತಿದ್ದ ಯುವತಿಯೊಬ್ಬರು ಮ್ಯಾರೀ ಮೀ ಶುಭ್​ಮನ್ ಅಂತ ಬೋರ್ಡ್​ ಹಿಡಿದ್ದು ನಿಂತ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಪೃಥ್ವಿಶಂಕರ
|

Updated on: Jun 10, 2023 | 5:46 PM

Share
ಟೀಂ ಇಂಡಿಯಾದ ಯುವ ಬ್ಯಾಟರ್ ಹಾಗೂ ಭವಿಷ್ಯದ ನಾಯಕ ಎನಿಸಿಕೊಂಡಿರುವ ಶುಭ್​ಮನ್ ಗಿಲ್ ಸದ್ಯ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಶತಕಗಳ ಮೇಲೆ ಶತಕ ಸಿಡಿಸುವುದರೊಂದಿಗೆ ಐಪಿಎಲ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದಿದ್ದ ಗಿಲ್​ಗೆ ಇದೀಗ ಓವಲ್​ ಮೈದಾನದಲ್ಲಿ ಮದುವೆ ಪ್ರಪೋಸಲ್ ಬಂದಿದೆ.

1 / 7
ಸದ್ಯ ಓವಲ್​ ಮೈದಾನದಲ್ಲಿ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುತ್ತಿದೆ. ಈಗಾಗಲೇ 3 ದಿನಗಳ ಆಟ ಮುಗಿದಿದ್ದು, 4ನೇ ದಿನದ ಮೊದಲ ಸೆಷನ್ ಕೂಡ ಮುಗಿದಿದೆ. ಆದರೆ ಈ ನಡುವೆ ಟೀಂ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್​ಗೆ ಓವಲ್ ಮೈದಾನದಲ್ಲಿ ಮ್ಯಾಚ್ ನೋಡಲು ಬಂದಿದ್ದ ಯುವತಿಯೊಬ್ಬರು ಮದುವೆಯ ಪ್ರಸ್ತಾಪ ಮಾಡಿದ್ದಾರೆ.

2 / 7
ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ 3ನೇ ದಿನದಂದು ಈ ಘಟನೆ ನಡೆದಿದ್ದು, ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತಿದ್ದ ಯುವತಿಯೊಬ್ಬರು ಮ್ಯಾರೀ ಮೀ ಶುಭ್​ಮನ್ ಅಂತ ಬೋರ್ಡ್​ ಹಿಡಿದ್ದು ನಿಂತ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

3 / 7
ಶುಭ್​ಮನ್ ಗಿಲ್ ವೈಯಕ್ತಿಕ ಬದುಕಿಗೆ ಬರುವುದಾದರೆ ಈ ಯುವ ಕ್ರಿಕೆಟಿಗನ ಹೆಸರಿನೊಂದಿಗೆ ಪ್ರಮುಖವಾಗಿ ಇಬ್ಬರು ಹುಡುಗಿಯರ ಹೆಸರು ತಳುಕು ಹಾಕಿಕೊಂಡಿದೆ. ಮೊದಲನೆಯದಾಗಿ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಆಗಿದ್ದರೆ, ಇನ್ನೊಬ್ಬರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ತೆಂಡೂಲ್ಕರ್.

4 / 7
ಪ್ರಿನ್ಸ್ ಗಿಲ್ ಹಾಗೂ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಲಾರಂಭಿಸಿತ್ತು. ಹೋಟೆಲ್ ಒಂದರಲ್ಲಿ ಇಬ್ಬರೂ ಭೇಟಿ ಆಗಿದ್ದು ಈ ಸುದ್ದಿ ಹುಟ್ಟಲು ಪ್ರಮುಖ ಕಾರಣವಾಗಿತ್ತು. ಇದಾದ ಬಳಿಕ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಭೇಟಿ ಆಗಿ ಗಂಟೆಗಟ್ಟಲೆ ಹರಟೆ ಹೊಡೆದಿದ್ದಾರೆ ಎನ್ನುವ ಸುದ್ದಿಯೂ ಕೇಳಿಬಂದಿತ್ತು. ಆದರೆ ಇತ್ತೀಚೆಗೆ ಕೇಳಿಬಂದಿರುವ ಮಾಹಿತಿ ಪ್ರಕಾರ ಈ ಇಬ್ಬರ ನಸಂಬಂಧ ಕೊನೆಯಾಗಿದೆ ಎಂದು ವರದಿ ಆಗಿದೆ.

5 / 7
ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ಜೊತೆಯೂ ಗಿಲ್ ಹೆಸರು ತಳುಕು ಹಾಕಿಕೊಂಡಿದ್ದು, ಈ ಇಬ್ಬರೂ ಪ್ರೇಮಿಗಳ ದಿನದಂದು ಒಟ್ಟಿಗೆ ಒಂದೇ ಹೋಟೆಲ್​ನಲ್ಲಿದ್ದರು ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಈ ಇಬ್ಬರೂ ಒಂದೇ ಹೋಟೆಲ್​ನಲ್ಲಿರುವ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ ಗಿಲ್ ಯಾರ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ.

6 / 7
ಇನ್ನು ಗಿಲ್ ಅವರ ಕ್ರಿಕೆಟ್ ಬದುಕಿನ ಕಡೆ ನೋಡುವುದಾದರೆ, ಸದ್ಯ ಟೀಂ ಇಂಡಿಯಾದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುತ್ತಿರುವ ಗಿಲ್, ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 14 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದ್ದರು. ಹೀಗಾಗಿ ಗಿಲ್ ಮೇಲೆ ಟೀಕಾ ಪ್ರಹಾರವೇ ನಡೆದಿತ್ತು. ಇದೀಗ 2ನೇ ಇನ್ನಿಂಗ್ಸ್​ನಲ್ಲಾದರೂ ಗಿಲ್ ಲಯ ಕಂಡುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ