WTC Final 2023: ಡಬ್ಲ್ಯುಟಿಸಿ ಫೈನಲ್ ಗೆದ್ದರೆ ಕ್ರಿಕೆಟ್ ದುನಿಯಾದಲ್ಲಿ ಹೊಸ ಇತಿಹಾಸ ಬರೆಯಲಿದೆ ಟೀಂ ಇಂಡಿಯಾ..!
WTC Final 2023: ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಕೊನೆಯದಾಗಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಮೂಲಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಆದರೆ ಆ ಬಳಿಕ ಭಾರತಕ್ಕೆ ಐಸಿಸಿ ಟ್ರೋಫಿ ಬಂದಿಲ್ಲ.
1 / 6
ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಿರುವ ಭಾರತ ಇದೇ ಜೂನ್ 7 ರಿಂದ ಓವಲ್ ಮೈದಾನದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸುತ್ತಿದೆ. ಒಂದು ವೇಳೆ ಟೀಂ ಇಂಡಿಯಾ ಈ ಟೆಸ್ಟ್ ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾದರೆ ಇದುವರೆಗಿನ ಕ್ರಿಕೆಟ್ ಇತಿಹಾಸದಲ್ಲಿ ಯಾವ ತಂಡವೂ ಮಾಡಲಾಗದ ಅಪರೂಪದ ದಾಖಲೆಯೊಂದನ್ನು ಬರೆಯಲಿದೆ.
2 / 6
ಇದರೊಂದಿಗೆ 2013ರ ಬಳಿಕ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲದ ಬರವನ್ನು ನೀಗಿಸಿಕೊಳ್ಳಿದೆ. ವಾಸ್ತವವಾಗಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಕೊನೆಯದಾಗಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಮೂಲಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಆದರೆ ಆ ಬಳಿಕ ಭಾರತಕ್ಕೆ ಐಸಿಸಿ ಟ್ರೋಫಿ ಬಂದಿಲ್ಲ.
3 / 6
ಇನ್ನು ಆಸೀಸ್ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದರೆ, ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಗಳಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ತದ್ವಿರುದ್ಧವಾಗಿ ಆಸ್ಟ್ರೇಲಿಯಾ ಫೈನಲ್ ಗೆದ್ದರೆ, ಆಸ್ಟ್ರೇಲಿಯಾ ಕೂಡ ಇದೇ ದಾಖಲೆ ಬರೆಯಲಿದೆ.
4 / 6
1984ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಿತ್ತು. ನಂತರ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 2007 ರ ಮೊದಲ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಆಗಿತ್ತು. ಆ ನಂತರ ಮತ್ತೊಮ್ಮೆ ಧೋನಿ ನಾಯಕತ್ವದಲ್ಲಿ 28 ವರ್ಷಗಳ ನಂತರ 2011ರಲ್ಲಿ ಭಾರತ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು.
5 / 6
WTC ಫೈನಲ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಸ್ ಭರತ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕಟ್. ಮೀಸಲು ಆಟಗಾರರು: ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಮುಖೇಶ್ ಕುಮಾರ್
6 / 6
WTC ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್ ಮತ್ತು ಮ್ಯಾಥ್ಯೂ ರೆನ್ಶಾ.