WTC Final 2023: ಬಲಿಷ್ಠ ಪ್ಲೇಯಿಂಗ್ ಇಲೆವೆನ್ನ ಕಣಕ್ಕಿಳಿಸಿದ ಟೀಮ್ ಇಂಡಿಯಾ
Team India Playing XI: ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ.
Updated on: Jun 07, 2023 | 2:37 PM

WTC Final 2023: ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಇನ್ನು ಆಸ್ಟ್ರೇಲಿಯಾ ತಂಡವು 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 29 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡರೆ, 1 ಪಂದ್ಯವು ರದ್ದಾಗಿತ್ತು.

ವಿಶೇಷ ಎಂದರೆ ಉಭಯ ತಂಡಗಳು ಇದೇ ಮೊದಲ ಬಾರಿಗೆ ತಟಸ್ಥ ಸ್ಥಳದಲ್ಲಿ ಮುಖಾಮುಖಿಯಾಗುತ್ತಿದೆ. ಹೀಗಾಗಿ ಓವಲ್ ಮೈದಾನದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನು ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಿದೆ. ಅದರಂತೆ ಭಾರತ ತಂಡದ ಆಡುವ ಬಳಗ ಈ ಕೆಳಗಿನಂತಿದೆ...


ಶುಭ್ಮನ್ ಗಿಲ್

ಚೇತೇಶ್ವರ ಪೂಜಾರ

ವಿರಾಟ್ ಕೊಹ್ಲಿ

ಅಜಿಂಕ್ಯ ರಹಾನೆ

ರವೀಂದ್ರ ಜಡೇಜಾ

ಕೆಎಸ್ ಭರತ್ (ವಿಕೆಟ್ ಕೀಪರ್)

ಮೊಹಮ್ಮದ್ ಸಿರಾಜ್

ಉಮೇಶ್ ಯಾದವ್

ಮೊಹಮ್ಮದ್ ಶಮಿ

ಶಾರ್ದೂಲ್ ಠಾಕೂರ್



















