WTC Final 2023: 2 ವರ್ಷ 18 ಪಂದ್ಯ; ಹೀಗಿತ್ತು ಟೀಂ ಇಂಡಿಯಾದ ಡಬ್ಲ್ಯುಟಿಸಿ ಫೈನಲ್ ಪ್ರಯಾಣ

|

Updated on: Jun 01, 2023 | 4:52 PM

WTC Final 2023: ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ.

1 / 9
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೊದಲ ಆವೃತ್ತಿಯ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಟೀಂ ಇಂಡಿಯಾ ಇದೀಗ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಂದಹಾಗೆ ಟೀಂ ಇಂಡಿಯಾದ ಈ ಫೈನಲ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ಹಲವು ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿದ ರೋಹಿತ್ ಪಡೆ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿದೆ.

2 / 9
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡ ಒಟ್ಟು 6 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ತಂಡ ಕೇವಲ ಒಂದು ಬಾರಿ ಸರಣಿ ಸೋತಿದ್ದು, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದಲ್ಲದೇ ನಾಲ್ಕು ಸರಣಿಗಳನ್ನು ಟೀಂ ಇಂಡಿಯಾ ಗೆದ್ದಿದೆ.

3 / 9
ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದಂತೆ 3 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಪ್ರಯಾಣ ಹೇಗಿತ್ತು ಎಂಬುದನ್ನು ನೋಡುವುದಾದರೆ..

4 / 9
ನ್ಯೂಜಿಲೆಂಡ್ ವಿರುದ್ಧದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತ ನಂತರ, ಅಂದರೆ ಆಗಸ್ಟ್ 2021 ರಲ್ಲಿ, ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿತು. ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಬೇಕಿತ್ತು. ಆದರೆ ಅಲ್ಲಿ 4 ಟೆಸ್ಟ್‌ಗಳು ಮಾತ್ರ ನಡೆದವು. ಸರಣಿಯ 5 ನೇ ಮತ್ತು ಕೊನೆಯ ಟೆಸ್ಟ್ ಜುಲೈ 2022 ಕ್ಕೆ ಮುಂದೂಡಲಾಯಿತು. ಅಂತಿಮವಾಗಿ 5 ಪಂದ್ಯಗಳ ಈ ಸರಣಿ 2-2ರಲ್ಲಿ ಸಮಬಲಗೊಂಡಿತು.

5 / 9
ನಂತರ ಡಿಸೆಂಬರ್ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2 ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು.

6 / 9
ಡಿಸೆಂಬರ್ 2021 ಮತ್ತು ಜನವರಿ 2022 ರ ನಡುವೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ರ ಅಂತರದಲ್ಲಿ ಕಳೆದುಕೊಂಡಿತು.

7 / 9
ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ 2ಟೆಸ್ಟ್ ಪಂದ್ಯಗಳ ಸರಣಿಯನ್ನಾಡಿದ ಭಾರತ, ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

8 / 9
ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ ಭಾರತ, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

9 / 9
ಫೆಬ್ರವರಿ-ಮಾರ್ಚ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ ಭಾರತ, ಸರಣಿಯನ್ನ 2-1 ರಿಂದ ಗೆದ್ದುಕೊಂಡಿತು.