Updated on: Jun 10, 2023 | 7:23 PM
WTC Final 2023: ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ ಡಿಕ್ಲೇರ್ ಘೋಷಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಅವರ ಶತಕದ ನೆರವಿನಿಂದ 469 ರನ್ ಕಲೆಹಾಕಿತು.
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಅಜಿಂಕ್ಯ ರಹಾನೆ (89) ಹಾಗೂ ಶಾರ್ದೂಲ್ ಠಾಕೂರ್ (51) ಅವರ ಅರ್ಧಶತಕದ ನೆರವಿನಿಂದ 296 ರನ್ಗಳಿಸಿ ಆಲೌಟ್ ಆಗಿತ್ತು.
173 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ ಪರ ಅಲೆಕ್ಸ್ ಕ್ಯಾರಿ (66) ಅರ್ಧಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ 8 ವಿಕೆಟ್ ನಷ್ಟಕ್ಕೆ 270 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಟೀಮ್ ಇಂಡಿಯಾಗೆ ಈ ಪಂದ್ಯದಲ್ಲಿ ಗೆಲ್ಲಲು ದ್ವಿತೀಯ ಇನಿಂಗ್ಸ್ನಲ್ಲಿ 444 ರನ್ಗಳ ಬೃಹತ್ ಗುರಿ ಬೆನ್ನತ್ತಬೇಕಿದೆ. ಸದ್ಯ 4ನೇ ದಿನದಾಟದ 2ನೇ ಸೆಷನ್ ನಡೆಯುತ್ತಿದ್ದು, ಇದಾದ ಬಳಿಕ 5ನೇ ದಿನದಾಟ ಬಾಕಿಯಿದೆ.
ಅಂದರೆ 137 ಓವರ್ಗಳು ಬಾಕಿಯಿದ್ದು, ಇದರೊಳಗೆ ಟೀಮ್ ಇಂಡಿಯಾ 444 ರನ್ ಕಲೆಹಾಕಿದೆ. ಇಲ್ಲಿ ಟೀಮ್ ಇಂಡಿಯಾ ಪ್ರತಿ ಓವರ್ಗೆ 3.24 ರ ಸರಾಸರಿಯಲ್ಲಿ ರನ್ ಕಲೆಹಾಕಿದರೆ ಗೆಲ್ಲಬಹುದು. ಆದರೆ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿರುವ ಆಸೀಸ್ ವಿರುದ್ಧ ಭಾರತೀಯ ಬ್ಯಾಟ್ಸ್ಮನ್ ಹೇಗೆ ಬ್ಯಾಟ್ ಬೀಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.