WTC Final 2023: ಸಚಿನ್ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ

WTC Final 2023: ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2000 ರನ್ ಪೂರೈಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 11, 2023 | 7:23 PM

WTC Final 2023: ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಒಟ್ಟು 63 ರನ್​ಗಳಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಯ ಸರದಾರ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
WTC ಫೈನಲ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 14 ರನ್​ಗಳಿಸಿದ್ದ ಕೊಹ್ಲಿ 2ನೇ ಇನಿಂಗ್ಸ್​ನಲ್ಲಿ 49 ರನ್​ ಬಾರಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ 5 ಸಾವಿರ ರನ್​ ಕಲೆಹಾಕಿದ ವಿಶೇಷ ದಾಖಲೆ ಬರೆದರು.

2 / 5
ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಮಾತ್ರ ಆಸ್ಟ್ರೇಲಿಯಾ ವಿರುದ್ಧ 5 ಸಾವಿರಕ್ಕೂ ಅಧಿಕ ರನ್​ ಕಲೆಹಾಕಿದ ದಾಖಲೆ ಹೊಂದಿದ್ದರು. ಮಾಸ್ಟರ್ ಬ್ಲಾಸ್ಟರ್ ಆಸ್ಟ್ರೇಲಿಯಾ ವಿರುದ್ಧ 144 ಇನ್ನಿಂಗ್ಸ್‌ಗಳಲ್ಲಿ (ಏಕದಿನ+ಟೆಸ್ಟ್) ಒಟ್ಟು 6707 ರನ್​ ಕಲೆಹಾಕಿದ್ದಾರೆ.

3 / 5
ಇದೀಗ ಆಸ್ಟ್ರೇಲಿಯಾ ವಿರುದ್ಧ ಒಟ್ಟು 93 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 5000+ ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ. ಅಲ್ಲದೆ ಆಸೀಸ್ ವಿರುದ್ದ 5 ಸಾವಿರ ರನ್ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 5
ಇದಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2000 ರನ್ ಪೂರೈಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (3630), ವಿವಿಎಸ್ ಲಕ್ಷ್ಮಣ್ (2434), ರಾಹುಲ್ ದ್ರಾವಿಡ್ (2143) ಮತ್ತು ಚೇತೇಶ್ವರ ಪೂಜಾರ (2033) ಈ ಸಾಧನೆ ಮಾಡಿದ್ದರು.

5 / 5
Follow us