- Kannada News Photo gallery Cricket photos WTC Final 2023: Why is Ravichandran Ashwin not being included in the playing XI for India?
WTC Final 2023: ಪ್ಲೇಯಿಂಗ್ ಇಲೆವೆನ್ನಲ್ಲಿ ಅಶ್ವಿನ್ಗೆ ಚಾನ್ಸ್ ನೀಡದಿರಲು ಇದುವೇ ಕಾರಣ..!
WTC Final 2023: ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಇನ್ನು ಆಸ್ಟ್ರೇಲಿಯಾ ತಂಡವು 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 29 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡರೆ, 1 ಪಂದ್ಯವು ರದ್ದಾಗಿತ್ತು.
Updated on: Jun 07, 2023 | 3:58 PM

WTC Final 2023: : ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಅಶ್ವಿನ್ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ನೀಡಿಲ್ಲ ಎಂಬುದು ವಿಶೇಷ. ಅಂದರೆ ಆಡುವ ಬವಳಗದಲ್ಲಿ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.

ಇತ್ತ ಟೀಮ್ ಇಂಡಿಯಾ ಅತ್ಯುತ್ತಮ ಸ್ಪಿನ್ನರ್ಗಳಲ್ಲಿ ಒಬ್ಬರಾಗಿರುವ ಅಶ್ವಿನ್ ಅವರನ್ನು ಕೈ ಬಿಟ್ಟಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇಲ್ಲಿ ಹಿರಿಯ ಸ್ಪಿನ್ನರ್ರನ್ನು ಹೊರಗಿಡಲು ಮುಖ್ಯ ಕಾರಣ ಪಿಚ್ನ ಮೇಲ್ಮೈ.

ಹೌದು, ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್ ಎಂಬುದು ಬೌಲರ್ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್ ಪಿಚ್ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

ಹಾಗೆಯೇ ಅನಿರೀಕ್ಷಿತ ಬೌನ್ಸರ್ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ. ಹೀಗಾಗಿ ಸ್ಪಿನ್ನರ್ ಬದಲು ಹೆಚ್ಚುವರಿ ವೇಗದ ಬೌಲರ್ನನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

ಅದರಂತೆ ರವಿಚಂದ್ರನ್ ಅಶ್ವಿನ್ ಬದಲು ವೇಗದ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್









