WTC Final 2023: ಪ್ಲೇಯಿಂಗ್ ಇಲೆವೆನ್​ನಲ್ಲಿ ಅಶ್ವಿನ್​ಗೆ ಚಾನ್ಸ್ ನೀಡದಿರಲು ಇದುವೇ ಕಾರಣ..!

| Updated By: ಝಾಹಿರ್ ಯೂಸುಫ್

Updated on: Jun 07, 2023 | 3:58 PM

WTC Final 2023: ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಇನ್ನು ಆಸ್ಟ್ರೇಲಿಯಾ ತಂಡವು 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 29 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡರೆ, 1 ಪಂದ್ಯವು ರದ್ದಾಗಿತ್ತು.

1 / 8
WTC Final 2023: : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

2 / 8
ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಅಶ್ವಿನ್ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ನೀಡಿಲ್ಲ ಎಂಬುದು ವಿಶೇಷ. ಅಂದರೆ ಆಡುವ ಬವಳಗದಲ್ಲಿ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.

3 / 8
ಇತ್ತ ಟೀಮ್ ಇಂಡಿಯಾ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಅಶ್ವಿನ್ ಅವರನ್ನು ಕೈ ಬಿಟ್ಟಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇಲ್ಲಿ ಹಿರಿಯ ಸ್ಪಿನ್ನರ್​ರನ್ನು ಹೊರಗಿಡಲು ಮುಖ್ಯ ಕಾರಣ ಪಿಚ್​ನ ಮೇಲ್ಮೈ.

4 / 8
ಹೌದು, ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

5 / 8
ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ. ಹೀಗಾಗಿ ಸ್ಪಿನ್ನರ್ ಬದಲು ಹೆಚ್ಚುವರಿ ವೇಗದ ಬೌಲರ್​ನನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

6 / 8
ಅದರಂತೆ ರವಿಚಂದ್ರನ್ ಅಶ್ವಿನ್ ಬದಲು ವೇಗದ ಬೌಲಿಂಗ್ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ.

7 / 8
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

8 / 8
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್