- Kannada News Photo gallery Cricket photos WTC Final 2023 WTC final It should be at least a three game series says David Warner
WTC Final 2023: ಡಬ್ಲ್ಯುಟಿಸಿ ಫೈನಲ್ ಬಗ್ಗೆ ಅಸಮಾಧಾನ ಹೊರಹಾಕಿದ ಡೇವಿಡ್ ವಾರ್ನರ್
WTC Final 2023: ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್ಶಿಪ್ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.
Updated on: Jun 04, 2023 | 4:55 PM

ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಘಟಕ್ಕೆ ಬಂದು ನಿಂತಿದೆ. ಜೂನ್ 7 ರಿಂದ ಲಂಡನ್‌ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. ಇನ್ನು ಟೀಂ ಇಂಡಿಯಾ ಈಗಾಗಲೇ ಒಮ್ಮೆ ಫೈನಲ್ ಆಡಿದ್ದು, ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿತ್ತು. ಆದರೆ ಆಸ್ಟ್ರೇಲಿಯ ತಂಡ ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಸಜ್ಜಾಗಿದ್ದು, ಟೆಸ್ಟ್ ವಿಶ್ವಕಪ್ ಗೆಲ್ಲಲು ಸಜ್ಜಾಗಿದೆ.

ಎರಡು ವರ್ಷಗಳ ಸರಣಿಯಲ್ಲಿ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಫೈನಲ್‌ಗೆ ಪ್ರಯಾಣ ಬೆಳೆಸಿದೆ.

ಆದರೆ ಮೊದಲ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್ ಡೇವಿಡ್ ವಾರ್ನರ ಗೆ ಮಾತ್ರ ಡಬ್ಲ್ಯುಟಿಸಿ ಫೈನಲ್ ಆಡಿಸುವ ವಿಧಾನದ ಬಗ್ಗೆ ಅಸಮಾಧಾನವಿದ್ದಂತೆ ತೋರುತ್ತ್ತಿದೆ. ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್ಶಿಪ್ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

ಇಂಗ್ಲೆಂಡ್‌ನಲ್ಲಿ ತಮ್ಮ ಸಿದ್ಧತೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಎರಡು ವರ್ಷಗಳ ಕಾಲ ನಡೆಯುವ ಇಂತಹ ಶ್ರೇಷ್ಠ ಟೂರ್ನಿಯ ಫೈನಲ್ ಪಂದ್ಯವನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಂತೆ ಆಡಬೇಕೆಂದು ಹೇಳುವ ಮೂಲಕ ವಾರ್ನರ್, ಡಬ್ಲ್ಯುಟಿಸಿ ಫೈನಲ್ ವಿಧಾನದಲ್ಲಿ ಬದಲಾವಣೆ ತರಬೇಕು ಎಂದಿದ್ದಾರೆ.

ಅಂದಹಾಗೆ, ಡಬ್ಲ್ಯುಟಿಸಿ ಫೈನಲ್ ವಿಧಾನದ ಬಗ್ಗೆ ಈ ರೀತಿ ಹೇಳಿಕೆ ನೀಡಿದ ಮೊದಲ ವ್ಯಕ್ತಿ ವಾರ್ನರ್ ಅಲ್ಲ. 2021 ರಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಫೈನಲ್ ಪಂದ್ಯ ನಡೆದಾಗ, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಆ ಸಮಯದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೂಡ ಫೈನಲ್‌ಗೆ ಒಂದು ಪಂದ್ಯ ಸಾಕಾಗುವುದಿಲ್ಲ ಎಂದಿದ್ದರು. ಆದರೆ, ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ಯಾಲೆಂಡರ್‌ನಿಂದಾಗಿ ಮೂರು ಪಂದ್ಯಗಳ ಸರಣಿಗೆ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಉತ್ತರವನ್ನು ಐಸಿಸಿ ನೀಡಿತ್ತು.









