ಭರ್ಜರಿ ಸೆಂಚುರಿಯೊಂದಿಗೆ ಹೊಸ ಇತಿಹಾಸ ರಚಿಸಿದ ಐಡೆನ್ ಮಾರ್ಕ್ರಾಮ್ 

Updated on: Jun 14, 2025 | 8:04 AM

Aiden Markram Record: ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ಆರಂಭಿಕ ದಾಂಡಿಗ ಐಡೆನ್ ಮಾರ್ಕ್ರಾಮ್ 158 ಎಸೆತಗಳಲ್ಲಿ ಅಜೇಯ 102 ರನ್ ಬಾರಿಸಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಮಾರ್ಕ್ರಾಮ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಸೌತ್ ಆಫ್ರಿಕಾ ತಂಡವು ಐಸಿಸಿ ಟೂರ್ನಿಯಲ್ಲಿ ಫೈನಲ್ ಆಡಿರುವುದು ಕೇವಲ ಮೂರು ಬಾರಿ. ಕಳೆದ ಎರಡು ಬಾರಿಯ ಫೈನಲ್ ಫೈಟ್​ನಲ್ಲಿ ಸಾಧ್ಯವಾಗದ ಸಾಧನೆಯನ್ನು ಈ ಬಾರಿ ಐಡೆನ್ ಮಾರ್ಕ್ರಾಮ್ ಮಾಡಿದ್ದಾರೆ. ಆದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

2 / 5
ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಐಡೆನ್ ಮಾರ್ಕ್ರಾಮ್ ಆಕರ್ಷಕ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಸಿಸಿ ಟೂರ್ನಿಯ ಫೈನಲ್​ನಲ್ಲಿ ಸೆಂಚುರಿ ಸಿಡಿಸಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ 1998 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ ವಿರುದ್ಧದ ಸೌತ್ ಆಫ್ರಿಕಾದ ಮಾಜಿ ನಾಯಕ ಹ್ಯಾನ್ಸಿ ಕ್ರೋನಿಯೆ ಅಜೇಯ 61 ರನ್​ ಬಾರಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದಾದ ಬಳಿಕ 2024ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹೆನ್ರಿಕ್ ಕ್ಲಾಸೆನ್ 52 ರನ್ ಬಾರಿಸಿದ್ದರು.

4 / 5
ಇದೀಗ ಐಸಿಸಿ ಫೈನಲ್ ಪಂದ್ಯದಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ಐಡೆನ್ ಮಾರ್ಕ್ರಾಮ್ ಹೊಸ ಇತಿಹಾಸ ರಚಿಸಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದ ನಾಲ್ಕನೇ ಇನಿಂಗ್ಸ್​ನಲ್ಲಿ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮಾರ್ಕ್ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 212 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 138 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 207 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ 74 ರನ್​ಗಳ ಹಿನ್ನಡೆಯೊಂದಿಗೆ ಸೌತ್ ಆಫ್ರಿಕಾ ತಂಡವು ಕೊನೆಯ ಇನಿಂಗ್ಸ್​ನಲ್ಲಿ 282 ರನ್​ ಗುರಿ ಪಡೆದಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ. ಇನ್ನು 69 ರನ್​ಗಳಿಸಿ ಸೌತ್ ಆಫ್ರಿಕಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.