Updated on: Jun 11, 2023 | 6:23 PM
WTC Final 2023: ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಐಸಿಸಿ ಆಯೋಜಿಸುವ ಎಲ್ಲಾ ಟೂರ್ನಿಗಳಲ್ಲೂ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ವಿಶ್ವ ದಾಖಲೆಯೊಂದು ಆಸ್ಟ್ರೇಲಿಯಾ ತಂಡದ ಪಾಲಾಗಿದೆ. ಅಂದರೆ ಆಸ್ಟ್ರೇಲಿಯಾ ತಂಡವನ್ನು ಹೊರತುಪಡಿಸಿ ಯಾವುದೇ ತಂಡ ಐಸಿಸಿಯ ಎಲ್ಲಾ ಟ್ರೋಫಿಗಳನ್ನು ಗೆದ್ದಿಲ್ಲ.
1987,1999,2003,2007,2015 ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಆಸ್ಟ್ರೇಲಿಯಾ ತಂಡವು 2006 ಹಾಗೂ 2009 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.
ಇನ್ನು 2021 ರ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟಕ್ಕೇರುವ ಮೂಲಕ ಚುಟುಕು ಕ್ರಿಕೆಟ್ನಲ್ಲೂ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಇದೀಗ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 209 ರನ್ಗಳಿಂದ ಬಗ್ಗು ಬಡಿದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ 9 ಐಸಿಸಿ ಟ್ರೋಫಿ ಗೆದ್ದ ಏಕೈಕ ತಂಡ ಹಾಗೂ ಎಲ್ಲಾ ಐಸಿಸಿ ಟ್ರೋಫಿಗಳನ್ನು ಮುಡಿಗೇರಿಸಿಕೊಂಡ ತಂಡವೆಂಬ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ.
ಅಂದಹಾಗೆ ಭಾರತ ತಂಡವು 1983, 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದರೆ, 2007 ರಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಇನ್ನು 2002 ಹಾಗೂ 2013 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದಾಗ್ಯೂ 2 ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಿದರೂ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಾಗಲಿಲ್ಲ.