AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ಗಾಬಾ ಟೆಸ್ಟ್ ಡ್ರಾನಲ್ಲಿ ಅಂತ್ಯ; ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಆದ ಬದಲಾವಣೆಗಳೇನು?

WTC Points Table: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಪಂದ್ಯ ಮಳೆಯಿಂದಾಗಿ ಡ್ರಾ ಆಗಿದೆ. ಆದಾಗ್ಯೂ ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ತಲುಪುವ ಆಸೆ ಇನ್ನೂ ಜೀವಂತವಾಗಿದೆ. ಆದರೆ, ಮುಂದಿನ ಎರಡು ಪಂದ್ಯಗಳು ಭಾರತಕ್ಕೆ ಬಹುಮುಖ್ಯವಾಗಿದ್ದು, ಈ ಎರಡೂ ಪಂದ್ಯಗಳನ್ನು ಗೆಲ್ಲುವುದು ರೋಹಿತ್​ ಪಡೆಗೆ ಅತ್ಯಗತ್ಯವಾಗಿದೆ.

ಪೃಥ್ವಿಶಂಕರ
|

Updated on:Dec 18, 2024 | 3:00 PM

ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಗೆಲುವಿಗೆ 275 ರನ್​ಗಳ ಗುರಿ ಪಡೆದಿದ್ದ ಟೀಂ ಇಂಡಿಯಾಕ್ಕೆ ಗುರಿ ಬೆನ್ನಟ್ಟುವ ಅವಕಾಶವನ್ನು ವರುಣ ಮಾಡಿಕೊಡಲಿಲ್ಲ. ಹೀಗಾಗಿ ಪಂದ್ಯದ ಐದನೇ ದಿನದಾಟವನ್ನೂ ಸಹ ಮಳೆಯಿಂದಾಗಿ ರದ್ದು ಮಾಡಬೇಕಾಯಿತು.

1 / 6
ಐದು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಸದ್ಯ ಮೂರು ಪಂದ್ಯಗಳ ಬಳಿಕ ಎರಡೂ ತಂಡಗಳು ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿವೆ. ಪಂದ್ಯ ರದ್ದಾದ ನಂತರವೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ತಲುಪುವ ಟೀಂ ಇಂಡಿಯಾದ ಆಸೆ ಇನ್ನೂ ಹಾಗೆಯೇ ಉಳಿದಿದೆ.

2 / 6
ಗಾಬಾ ಟೆಸ್ಟ್ ರದ್ದಾದ ನಂತರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 4 ಅಂಕ ಪಡೆದಿವೆ. ಐಸಿಸಿ ನಿಯಮಗಳ ಪ್ರಕಾರ ಪಂದ್ಯ ರದ್ದಾದ ಬಳಿಕ ಎರಡೂ ತಂಡಗಳು ಸಮಾನ ಅಂಕ ಪಡೆಯುತ್ತವೆ. ಆ ಪ್ರಕಾರ ಈ ಪಂದ್ಯದ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ.

3 / 6
ಆಂದರೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಮುಂದುವರೆದಿದ್ದರೆ, ಆಸ್ಟ್ರೇಲಿಯ ಎರಡನೇ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಗಾಬಾ ಟೆಸ್ಟ್‌ನ ನಂತರ ಆಸ್ಟ್ರೇಲಿಯಾ 106 ಮತ್ತು ಭಾರತ 114 ಅಂಕಗಳನ್ನು ಹೊಂದಿದೆ.

4 / 6
ಸದ್ಯಕ್ಕೆ ಬಾರ್ಡರ್ ಗವಾಸ್ಕರ್ ಟ್ರೋಫಿಯ 2 ಪಂದ್ಯಗಳು ಬಾಕಿ ಉಳಿದಿವೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಏಕಾಂಗಿಯಾಗಿ ಫೈನಲ್‌ಗೆ ಲಗ್ಗೆ ಇಡಬೇಕಾದರೆ ಟೀಂ ಇಂಡಿಯಾ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕು. ಒಂದು ವೇಳೆ ಸರಣಿಯನ್ನು 3-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದುಕೊಂಡರೆ ಡಬ್ಲ್ಯುಟಿಸಿ ಫೈನಲ್‌ಗೆ ಟಿಕೆಟ್ ಪಡೆಯಲಿದೆ.

5 / 6
ಒಂದು ವೇಳೆ ಸರಣಿ 2-2ರಲ್ಲಿ ಅಂತ್ಯಗೊಂಡರೆ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಫಲಿತಾಂಶದ ಮೇಲೆ ಟೀಂ ಇಂಡಿಯಾ ಅವಲಂಬಿತವಾಗಬೇಕಾಗುತ್ತದೆ. ಈ ಸರಣಿಯಲ್ಲಿ, ಶ್ರೀಲಂಕಾ ತಂಡವು ಆಸ್ಟ್ರೇಲಿಯಾವನ್ನು ಮಣಿಸಿದರೆ ಟೀಂ ಇಂಡಿಯಾದ ಡಬ್ಲ್ಯುಟಿಸಿ ಫೈನಲ್ ಹಾದಿ ಸುಗಮವಾಗಲಿದೆ.

6 / 6

Published On - 2:59 pm, Wed, 18 December 24

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ