WTC Final: ಹೀಗಾದ್ರೆ ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ಫೈನಲ್ ಫೈಟ್

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯಕ್ಕಾಗಿ ಇದೀಗ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದರಂತೆ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಭಾರತ... ಈ ಮೂರು ತಂಡಗಳಲ್ಲಿ ಎರಡು ಟೀಮ್ ಈ ಬಾರಿ ಫೈನಲ್ ಆಡುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on: Dec 23, 2024 | 10:20 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲಿ ಎರಡು ಬಾರಿ ಫೈನಲ್ ಆಡಿದ ಏಕೈಕ ತಂಡವೆಂದರೆ ಅದು ಟೀಮ್ ಇಂಡಿಯಾ. 2021 ರಲ್ಲಿ ಚೊಚ್ಚಲ ಬಾರಿ ಫೈನಲ್​ಗೆ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ 2023 ರಲ್ಲಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸುವ ಮೂಲಕ ಭಾರತ ತಂಡ ಪ್ರಶಸ್ತಿ ಗೆಲ್ಲುವ ಅವಕಾಶ ಕೈಚೆಲ್ಲಿಕೊಂಡಿತು. ಇದೀಗ ಮೂರನೇ ಬಾರಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸುವ ಹೊಸ್ತಿಲಲ್ಲಿದೆ.

1 / 6
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯಭೇರಿ ಬಾರಿಸಿದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 2-0 ಅಂತರದಿಂದ ಗೆಲುವು ದಾಖಲಿಸಿದರೂ, ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನವನ್ನು ಕಾಯ್ದುಕೊಳ್ಳಲಿದೆ.

2 / 6
ಹಾಗೆಯೇ ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡಕ್ಕೆ ಫೈನಲ್​ಗೆ ಎಂಟ್ರಿ ಕೊಡಲು ಬೇಕಿರುವುದು ಕೇವಲ 1 ಜಯ ಮಾತ್ರ. ಪಾಕಿಸ್ತಾನ್ ವಿರುದ್ಧದ 2 ಪಂದ್ಯಗಳ ಸರಣಿಯಲ್ಲಿ ಒಂದು ಗೆಲುವು ದಾಖಲಿಸಿದರೆ ಸೌತ್ ಆಫ್ರಿಕಾ ತಂಡ ಫೈನಲ್​ ಆಡುವುದು ಖಚಿತವಾಗಲಿದೆ.

3 / 6
ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 2 ಜಯ ಸಾಧಿಸಿದರೆ, ಅತ್ತ ಸೌತ್ ಆಫ್ರಿಕಾ ತಂಡವು 1 ಗೆಲುವು ದಾಖಲಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ​ ಫೈನಲ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಹೀಗಾಗಿಯೇ ಈ ಬಾರಿ ಭಾರತ ತಂಡದ ಎದುರಾಳಿಯಾಗಿ ಸೌತ್ ಆಫ್ರಿಕಾ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

4 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

5 / 6
ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ 2ನೇ ಸ್ಥಾನಕ್ಕೇರಬಹುದು. ಈ ಮೂಲಕ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಅದರಂತೆ ಜೂನ್ 11 ರಿಂದ ಶುರುವಾಗಲಿರುವ ಮೂರನೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು

Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ

ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು