AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಮೆಲ್ಬೋರ್ನ್​ನಲ್ಲಿ ಸೋತರೆ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ

WTC final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್ ಸುತ್ತಿಗೆ ಪ್ರವೇಶಿಸಲು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಭಾರತ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸಬೇಕಿದ್ದರೆ ಮೆಲ್ಬೋರ್ನ್ ಹಾಗೂ ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Dec 30, 2024 | 7:31 AM

Share
ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

1 / 6
ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

4 / 6
ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

5 / 6
ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

6 / 6
Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​

ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ

ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ

ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು

ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ

ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ

ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?

ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್

ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ