- Kannada News Photo gallery Cricket photos WTC final: What will happen if India loses the MCG Test vs Australia?
WTC final: ಮೆಲ್ಬೋರ್ನ್ನಲ್ಲಿ ಸೋತರೆ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ
WTC final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್ ಸುತ್ತಿಗೆ ಪ್ರವೇಶಿಸಲು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಭಾರತ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸಬೇಕಿದ್ದರೆ ಮೆಲ್ಬೋರ್ನ್ ಹಾಗೂ ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.
Updated on: Dec 30, 2024 | 7:31 AM

ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್ನಲ್ಲಿ 340 ರನ್ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್ ಟೆಸ್ಟ್ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

ಭಾರತ ತಂಡವು ಮೆಲ್ಬೋರ್ನ್ನಲ್ಲಿ ಸೋತು, ಸಿಡ್ನಿ ಟೆಸ್ಟ್ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಬಹುದು.

ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.
