WTC Point Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಟೀಮ್ ಇಂಡಿಯಾಗೆ ಒಂದೆಜ್ಜೆ ಮಾತ್ರ ಬಾಕಿ..!

WTC Points Table 2023: ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಶ್ರೀಲಂಕಾ 2-0 ಅಂತರದಿಂದ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: Feb 19, 2023 | 8:32 PM

WTC Point Table: ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್​ನಲ್ಲೂ ಟೀಮ್ ಇಂಡಿಯಾದ ಗೆಲುವಿನ ಸರಾಸರಿಯಲ್ಲಿ ಏರಿಕೆ ಕಂಡಿದೆ.

1 / 8
ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್​ ಟೇಬಲ್​ನಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್ ಆಡಲಿವೆ. ಇಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿದೆ.

2 / 8
ಇನ್ನು ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೂ ಫೈನಲ್ ಪ್ರವೇಶಿಸುವ ಅವಕಾಶವಿದೆ. ಆದರೀಗ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಒಂದು ವೇಳೆ ಇಂದೋರ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಫೈನಲ್​ಗೆ ಎಂಟ್ರಿ ಕೊಡಲಿದೆ.

3 / 8
ಇತ್ತ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಶ್ರೇಯಾಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದರೆ ಶ್ರೀಲಂಕಾ ತಂಡದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಟೀಮ್ ಇಂಡಿಯಾ ಆಸೀಸ್ ವಿರುದ್ಧ ಟೆಸ್ಟ್​ ಸರಣಿಯನ್ನು 4-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದರೆ, ಶ್ರೀಲಂಕಾ ತಂಡಕ್ಕೆ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.

4 / 8
ಅದರಂತೆ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಶ್ರೀಲಂಕಾ 2-0 ಅಂತರದಿಂದ ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಬಹುದು. ಹೀಗಾಗಿ ಭಾರತದ ವಿರುದ್ಧ ಮುಂದಿನ ಎರಡು ಟೆಸ್ಟ್​ ಪಂದ್ಯಗಳಲ್ಲಿ ಗೆಲ್ಲಲು ಆಸೀಸ್ ಪಡೆ ಇನ್ನಿಲ್ಲದ ಪ್ರಯತ್ನ ಮಾಡಲಿದೆ.

5 / 8
ಇನ್ನು ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ 1 ರಲ್ಲಿ ಗೆದ್ದರೂ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3-0 ಅಥವಾ 3-1 ಅಂತರದಿಂದ ಸರಣಿ ಗೆದ್ದರೂ ಕೂಡ ಡಬ್ಲ್ಯೂಟಿಸಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಸದ್ಯ 2-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಹೊಂದಿರುವ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಕೇವಲ 1 ಗೆಲುವಿನ ಅವಶ್ಯಕತೆಯಿದೆ.

6 / 8
ಅದರಂತೆ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಪಾಯಿಂಟ್ ಟೇಬಲ್​ ಹೀಗಿದ್ದು, ಇಲ್ಲಿ ಗೆಲುವು ಶೇಕಡಾವಾರು ಮೂಲಕ ತಂಡಗಳ ಸ್ಥಾನ ನಿರ್ಧರಿಸಲಾಗುತ್ತದೆ. ಅಂದರೆ ಪ್ರಸ್ತುತ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವು 66.67 ಗೆಲುವಿನ ಶೇಕಡಾವಾರು ಹೊಂದಿದ್ದರೆ, ಟೀಮ್ ಇಂಡಿಯಾ 64.06 ಗೆಲುವಿನ ಶೇಕಡಾವಾರು ಹೊಂದಿದೆ. ಇಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಗೆಲುವಿನ ಪರ್ಸಂಟೇಜ್​ ವ್ಯತ್ಯಾಸ ಕೇವಲ 2.61 ಮಾತ್ರ. ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸುವ ಅವಕಾಶವಿದೆ.

7 / 8
IND vs AUS

IND vs AUS Test When and Where to watch India vs Australia third Test match of the Border-Gavaskar Trophy

8 / 8
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್